ಹಾಸನ: ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಕಾಡಾನೆಗಳು ಬೀಡುಬಿಟ್ಟಿವೆ. ಮಿತಿಮೀರಿದ ಕಾಡಾನೆಗಳ ಹಾವಳಿಗೆ ರೈತರು ಕಂಗಾಲಾಗಿದ್ದಾರೆ. ತಾಲೂಕಿನ ಬಿಕ್ಕೋಡು, ಇಲಕರವಳ್ಳಿ, ಲಕ್ಕುಂದ, ಮಲ್ಸಾವರ, ಮತ್ಸಾವರ ಸೇರಿ ವಿವಿಧ ಗ್ರಾಮದಲ್ಲಿ ೩೦ಕ್ಕೂ ಹೆಚ್ಚು ಕಾಡಾನೆಗಳು ಬೀಡು ಬಿಟ್ಟಿವೆ. ಕಾಫಿ, ಬಾಳೆ, ಮೆಕ್ಕೆಜೋಳ, ಭತ್ತ, ಮೆಣಸು ಸೇರಿ ಇನ್ನಿತರ ಬೆಳೆಗಳನ್ನು ನಾಶ ಮಾಡಿವೆ. ಇದೀಗ ಕಾಡಾನೆಗಳನ್ನು ಕಾಡಿಗಟ್ಟಲು ಇಟಿಎಫ್ ಸಿಬ್ಬಂದಿಗಳು ಹರಸಾಹಸ ನಡೆಸಿದ್ದಾರೆ. ಇತ್ತ ಕಾಡಾನೆಗಳ ಮುಕ್ತಿಗೆ ಸರ್ಕಾರ, ಅರಣ್ಯ ಇಲಾಖೆಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ತೋಟಕ್ಕೆ ಬರಲು ಹಿಂದೇಟು ಹಾಕುತ್ತಿರುವ ಮಾಲೀಕರು ಹಾಗೂ ಕಾರ್ಮಿಕರು.
ಬರಗಾಲದಲ್ಲೂ ಅಲ್ಪಸ್ವಲ್ಪ ಬೆಳೆದಿದ್ದ ಬೆಳೆಗಳು ಕಾಡಾನೆ ಪಾಲಾಗಿದೆ. ಕಾಡಾನೆ ಹಾವಳಿಯಿಂದ ರೈತರು ಹಾಗೂ ಕಾಫಿ ಬೆಳೆಗಾರರು ಭಯಭೀತರಾಗಿದ್ದು, ಜೀವ ಭಯದಿಂದ ಕಾಫಿ ತೋಟಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಹಗಲು ವೇಳೆ ಗಜಪಡೆಗಳು ರಸ್ತೆ ದಾಟುತ್ತಿದೆ. ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಂಡುಹಿಡಿಯದ ಸರ್ಕಾರ ಹಾಗೂ ಅರಣ್ಯ ಇಲಾಖೆಗೆ ಅನ್ನದಾತರು ಹಿಡಿಶಾಪ ಹಾಕುತ್ತಿದ್ದಾರೆ.