Monday, April 14, 2025
Google search engine

Homeರಾಜ್ಯವಕ್ಫ್ ಸಂಬಂಧ ವಿಧಾನಸಭೆ- ವಿಧಾನಪರಿಷತ್ತಿನ ಜಂಟಿ ಸದನ ಸಮಿತಿ ರಚಿಸಿ: ರವಿಕುಮಾರ್ ಒತ್ತಾಯ

ವಕ್ಫ್ ಸಂಬಂಧ ವಿಧಾನಸಭೆ- ವಿಧಾನಪರಿಷತ್ತಿನ ಜಂಟಿ ಸದನ ಸಮಿತಿ ರಚಿಸಿ: ರವಿಕುಮಾರ್ ಒತ್ತಾಯ

ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಆಪ್ತ ಕಾರ್ಯದರ್ಶಿ ಸೋಮು ತಮ್ಮ ಆತ್ಮಹತ್ಯೆಗೆ ಕಾರಣವೆಂದು ಪತ್ರ ಬರೆದಿಟ್ಟು ಎಸ್.ಡಿ.ಎ. ರುದ್ರಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರುದ್ರಣ್ಣ ಆತ್ಮಹತ್ಯೆಯ ಹೊಣೆ ಹೊತ್ತು ಲಕ್ಷ್ಮಿ ಹೆಬ್ಬಾಳ್ಕರ್ ರಾಜೀನಾಮೆ ಕೊಡಬೇಕೆಂದು ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಒತ್ತಾಯಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಅನೇಕ ದಿನಗಳಿಂದ ನೊಂದಿದ್ದು, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ರುದ್ರಣ್ಣ ವಾಟ್ಸಪ್ ಸಂದೇಶ ಕಳಿಸಿದ್ದಾರೆ. ನನ್ನ ಸಾವಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಆಪ್ತ ಕಾರ್ಯದರ್ಶಿ ಕಾರಣ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಸಂದರ್ಭದಲ್ಲೂ ಇದೇಮಾದರಿ ಪತ್ರ ಬರೆದಿಡಲಾಗಿತ್ತು ಎಂದು ವಿವರಿಸಿದರು. ಹೇಗೆ ಈಶ್ವರಪ್ಪ ಅವರು ರಾಜೀನಾಮೆ ಕೊಟ್ಟಿದ್ದರೋ ಅದೇ ಮಾದರಿಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ರಾಜೀನಾಮೆ ಕೊಡಬೇಕೆಂದು ತಿಳಿಸಿದರು.

ವಕ್ಫ್ ಸಂಬಂಧ ವಿಧಾನಸಭೆ- ವಿಧಾನಪರಿಷತ್ತಿನ ಜಂಟಿ ಸದನ ಸಮಿತಿ ರಚಿಸಿ ತನಿಖೆ ಮಾಡಿ ಎಂದು ಒತ್ತಾಯಿಸಿದರು. ೪೭ ಸಾವಿರ ಎಕರೆ ಜಮೀನುಗಳಿಗೆ ನೋಟಿಸ್ ಕೊಟ್ಟಿದ್ದಾರೆ ಎಂದ ಅವರು, ಅಧಿಕಾರಿಗಳು ತಪ್ಪು ಮಾಡಿದ್ದಾರೆಂದು ಹೇಳುತ್ತಾರೆ. ಮುಡಾ ಹಗರಣ, ವಾಲ್ಮೀಕಿ ನಿಗಮ ಹಗರಣದಲ್ಲೂ ಇದೇ ಮಾತು ಹೇಳುತ್ತಾರೆ. ವಕ್ಫ್ ವಿಚಾರದಲ್ಲೂ ಇದೇ ಮಾತು. ಸಚಿವರು, ಮುಖ್ಯಮಂತ್ರಿಗಳು ಬಹಳ ಸಾಚಾ. ನಿಮ್ಮ ನಿರ್ದೇಶನ ಇಲ್ಲದೆ ಅಧಿಕಾರಿಗಳು ಹೇಗೆ ತಪ್ಪು ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.

RELATED ARTICLES
- Advertisment -
Google search engine

Most Popular