Friday, April 11, 2025
Google search engine

Homeಬ್ರೇಕಿಂಗ್ ನ್ಯೂಸ್ಪಠ್ಯ ಪರಿಷ್ಕರಣೆಗೆ ತಾತ್ಕಾಲಿಕ ಸಮಿತಿ ರಚನೆ: ಲೋಪದೋಷ ಸರಿಪಡಿಸುವಂತೆ ಸಿಎಂ ಸೂಚನೆ

ಪಠ್ಯ ಪರಿಷ್ಕರಣೆಗೆ ತಾತ್ಕಾಲಿಕ ಸಮಿತಿ ರಚನೆ: ಲೋಪದೋಷ ಸರಿಪಡಿಸುವಂತೆ ಸಿಎಂ ಸೂಚನೆ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಶಾಲಾ ಪಠ್ಯ ಪರಿಷ್ಕರಣೆಗೆ ಮುಂದಾಗಿದ್ದು, ಬಗ್ಗೆ ಬರಗೂರು ರಾಮಚಂದ್ರಪ್ಪ ‌ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚನೆ ಮಾಡಲಾಗಿದೆ.

ಶಾಲಾ ಪಠ್ಯದಲ್ಲಿ ಲೋಪದೋಷಗಳನ್ನು ಸರಿಪಡಿಸುವಂತೆ ಸಮಿತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಶಿಕ್ಷಣ ತಜ್ಞ ನಿರಂಜನ ಆರಾಧ್ಯ, ಬರಗೂರು ರಾಮಚಂದ್ರಪ್ಪ ಸೇರಿದಂತೆ ಸಾಹಿತಿಗಳ ಜೊತೆ ಚರ್ಚೆ ಮಾಡಿರುವ ಸಿದ್ದರಾಮಯ್ಯ, ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಪಠ್ಯ ಪರಿಷ್ಕರಣೆ ಲೋಪದೋಷಗಳು ಸರಿಪಡಿಸುವಂತೆ ಸಮಿತಿಗೆ ಹೇಳಿದ್ದಾರೆ.

ಯಾವ ಯಾವ ಪಾಠಗಳನ್ನು ಕೈಬಿಡಬೇಕು? ಪಾಠಗಳಲ್ಲಿ ಕೆಲ ಪದ ಬಳಿಕೆ ಎಲ್ಲಿಲ್ಲಿ ಸೇರಿಸಲಾಗಿದೆ? ಅದನ್ನ ಗುರುತಿಸುವಂತೆ ಸಿದ್ದರಾಮಯ್ಯ ಅವರು ಸಮಿತಿಗೆ ಸೂಚನೆ ನೀಡಿದ್ದು, ಇನ್ನೊಂದು ವಾರದಲ್ಲಿ ಪಠ್ಯ ಪರಿಷ್ಕರಣೆ ಲೋಪದೋಷ ಸಂಬಂಧ ವರದಿ ನೀಡುವಂತೆ ತಿಳಿಸಿದ್ದಾರೆ.

ಈ ಶೈಕ್ಷಣಿಕ ವರ್ಷದಲ್ಲಿ ಹೊಸ ಪಾಠಗಳ ಸೇರ್ಪಡೆ ಇಲ್ಲ. ಕಳೆದ ವರ್ಷ ಸೇರಿಸಲಾಗಿದ್ದ ಪಾಠಗಳಿಗೆ ಕತ್ತರಿ ಬೀಳುವ ಸಾಧ್ಯತೆ. ಆರ್.ಎಸ್ ಎಸ್ ಸಂಸ್ಥಾಪಕ ಕೇಶವ ಬಲಿರಾಮ್‌ ಹೆಡಗೇವಾರ್‌, ಮತ್ತು ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆ ಪಾಠಕ್ಕೆ ಕತ್ತರಿ ಬೀಳುವ ಸಾಧ್ಯತೆ ಎಂದು ತಿಳಿದುಬಂದಿದೆ. ಆದರೆ, 2023-24ನೇ ಶೈಕ್ಷಣಿಕ ಸಾಲಿಗೆ ಈಗಾಗಲೇ ಬಹುತೇಕ ಪೂರ್ಣ ಪ್ರಮಾಣದಲ್ಲಿ ಪಠ್ಯಪುಸ್ತಕಗಳು ಮುದ್ರಣವಾಗಿ ಶಾಲೆಗಳನ್ನು ತಲುಪಿರುವ ಹಿನ್ನೆಲೆಯಲ್ಲಿ ಪರಿಷ್ಕೃತ ಪಠ್ಯ ಮುದ್ರಿಸುವ ಪ್ರಕ್ರಿಯೆಗೆ ಕೈಹಾಕುವುದಿಲ್ಲ.

ಬದಲಾಗಿ, ವಿತರಿಸಲಾಗಿರುವ ಪಠ್ಯದಲ್ಲಿ ವಿವಾದಿತ ಹಾಗೂ ಆಕ್ಷೇಪಣೆ ಕೇಳಿಬಂದಿರುವ ಪಾಠಗಳನ್ನು ಪಟ್ಟಿಮಾಡಿ, ಅವುಗಳನ್ನು ಮಕ್ಕಳಿಗೆ ಬೋಧನೆ ಮಾಡದಂತೆ ಶಾಲೆಗಳಿಗೆ ಸುತ್ತೋಲೆ ಹೊರಡಿಸುವ ಸಾಧ್ಯತೆಗಳಿವೆ. ಈ ವಿಚಾರವನ್ನು ಮುಂದಿನ ಸಚಿವ ಸಂಪುಟದಲ್ಲಿ ಮತ್ತೊಮ್ಮೆ ಚರ್ಚಿಸಿ ಅನಂತರ ಅಧಿಕೃತವಾಗಿ ಪ್ರಕಟಿಸಲಿದೆ ಎಂದು ತಿಳಿದುಬಂದಿದೆ.

RELATED ARTICLES
- Advertisment -
Google search engine

Most Popular