Friday, April 18, 2025
Google search engine

Homeರಾಜ್ಯಸುದ್ದಿಜಾಲಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆ

ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆ

ಬೆಂಗಳೂರು: ಮೈಸೂರಿನ ಶ್ರೀ ಚಾಮುಂಡೇಶ್ವರಿ ದೇವಾಲಯಕ್ಕೆ ಬರುವ ಲಕ್ಷಾಂತರ ಭಕ್ತಾದಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯವನ್ನು ಕಲ್ಪಿಸುವ ಸಲುವಾಗಿ ಮತ್ತು ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ದಿ ಕೈಗೊಳ್ಳುವ ದೃಷ್ಟಿಯಿಂದ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಂದು ನೂತನ ಸರ್ಕಾರದ ಮೊದಲ ಬಜೆಟ್ ಮಂಡಿಸಿದ ಸಿದ್ದರಾಮಯ್ಯ, ಸುಮಾರು ಎರಡು ಗಂಟೆ 50 ನಿಮಿಷಗಳ ಕಾಲ ಬಜೆಟ್ ಮಂಡಿಸಿದ ಅವರು ಧಾರ್ಮಿಕ ದತ್ತಿ ಇಲಾಖೆಗೆ ಹಲವು ಯೋಜನೆಗಳನ್ನು ಘೋಷಿಸಿದರು.

ಪ್ರಮುಖ ಅಂಶಗಳು

ರಾಜ್ಯದಲ್ಲಿ ದೇವಾಲಯಗಳ ನಿರ್ಮಾಣಕ್ಕೆ ಹೊರ ರಾಜ್ಯದ ಶಿಲ್ಪಿಗಳ ಮೇಲೆ ಅವಲಂಬಿತರಾಗಿದ್ದು, ನಮ್ಮ ರಾಜ್ಯದಲ್ಲಿಯೂ ದೇವಾಲಯಗಳ ನಿರ್ಮಾಣಕ್ಕಾಗಿ ನುರಿತ ಶಿಲ್ಪಿಗಳನ್ನು ತಯಾರಿಸಲು ಕೋಲಾರ ಜಿಲ್ಲೆಯಲ್ಲಿ ಶಿಲ್ಪಕಲಾ ತರಬೇತಿ ಕೇಂದ್ರವನ್ನು ಪ್ರಾರಂಭಿಸಲಾಗುವುದು.

ಭೂ ಸುಧಾರಣಾ ಕಾಯ್ದೆ, 1974 ರನ್ವಯ ನಾನ್ ಇನಾಂ ಜಮೀನುಗಳು ಸರ್ಕಾರದಲ್ಲಿ ವಿಹಿತವಾಗಿರುವುದಕ್ಕೆ ಪರಿಹಾರಾರ್ಥವಾಗಿ ಒಟ್ಟು 3,721 ಸಂಸ್ಥೆಗಳಿಗೆ ಪ್ರಸ್ತುತ ಮಂಜೂರು ಮಾಡುತ್ತಿರುವ ವರ್ಷಾಸನ ಮೊತ್ತವನ್ನು 48,000 ರೂ.ಗಳಿಂದ 60,000 ರೂ.ಗಳಿಗೆ ಹೆಚ್ಚಿಸಲಾಗುವುದು. ಇದಕ್ಕಾಗಿ ಒಟ್ಟು 22 ಕೋಟಿ ರೂ.ಗಳ ಅನುದಾನ ಒದಗಿಸಲಾಗುವುದು.

ಯಾವುದೇ ಗಮನಾರ್ಹ ಆದಾಯವಿಲ್ಲದ ʻಸಿʼ ವರ್ಗದ ಒಟ್ಟು 121 ಮುಜರಾಯಿ ದೇವಸ್ಥಾನಗಳಿಗೆ ಕನಿಷ್ಠ 35 ರೂ.ಗಳಿಂದ  15,000 ರೂ.ಗಳವರೆಗೆ ನಗದು ಸಹಾಯಾನುದಾನ ನೀಡಲಾಗುತ್ತಿದ್ದು, ಎಲ್ಲಾ ದೇವಸ್ಥಾನಗಳಿಗೆ ಸಮಾನವಾಗಿ  15,000 ರೂ.ಗಳ ಸಹಾಯಾನುದಾನವನ್ನು ನೀಡಲಾಗುವುದು.

RELATED ARTICLES
- Advertisment -
Google search engine

Most Popular