Friday, April 18, 2025
Google search engine

Homeರಾಜಕೀಯನಾಗಮಂಗಲ ಗಲಭೆ:ಕಾಣದ ಕೈಗಳ ಪತ್ತೆಗೆ ಸತ್ಯಶೋಧನಾ ಸಮಿತಿ ರಚನೆ: ಡಾ. ಸಿಎನ್ ಅಶ್ವತ್ಥನಾರಾಯಣ

ನಾಗಮಂಗಲ ಗಲಭೆ:ಕಾಣದ ಕೈಗಳ ಪತ್ತೆಗೆ ಸತ್ಯಶೋಧನಾ ಸಮಿತಿ ರಚನೆ: ಡಾ. ಸಿಎನ್ ಅಶ್ವತ್ಥನಾರಾಯಣ

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ಗಲಭೆ ಬಗ್ಗೆ ಸಮಗ್ರ ತನಿಖೆ ಆಗಬೇಕು. ಸಮಗ್ರ ತನಿಖೆಯಾಗಿ ಸತ್ಯಾಸತ್ಯತೆ ಹೊರಬರಬೇಕು ಎಂದು ಬಿಜೆಪಿ ಸತ್ಯಶೋಧನಾ ಸಮಿತಿಯ ನೇತೃತ್ವ ವಹಿಸಿರುವ ​ಶಾಸಕ ಡಾ. ಸಿಎನ್ ಅಶ್ವತ್ಥನಾರಾಯಣ ಆಗ್ರಹಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಅವರು ಮಾತನಾಡಿ, ನಾಗಮಂಗಲದ ಘಟನೆ ಹಿಂದಿರುವ ಕಾಣದ ಕೈಗಳ ಪತ್ತೆ ಮಾಡಬೇಕು. ಇದನ್ನು ತಿಳಿಯಲು ಸತ್ಯಶೋಧನಾ ಸಮಿತಿ ರಚನೆ ಮಾಡಿಕೊಂಡಿದ್ದೇವೆ ಎಂದರು.

ಘಟನೆ ಬಗ್ಗೆ ಸ್ಥಳೀಯರಿಂದ ಮಾಹಿತಿ ಸಂಗ್ರಹಿಸುತ್ತಿದ್ದೇವೆ. ಕೇರಳದ ಇಬ್ಬರು ನಾಗಮಂಗಲ ಗಲಭೆಯಲ್ಲಿ ಶಾಮೀಲಾಗಿದ್ದಾರೆ. ಗಲಾಟೆಯಿಂದ ಹಾನಿಗೊಳಗಾದವರಿಗೆ ಸೂಕ್ತ ಪರಿಹಾರ ಸಿಗಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಗಣೇಶ ಮೂರ್ತಿಯನ್ನೇ ಅರೆಸ್ಟ್ ಮಾಡುತ್ತಾರೆ ಅಂದರೆ ಅವರ ಮನಸ್ಥಿತಿ ಹೇಗಿದೆ? ಜನರಿಗೆ ನಿಜ ಏನೆಂಬುದನ್ನು, ಪರಿಸ್ಥಿತಿಯನ್ನು ತಿಳಿಸುವ ಕೆಲಸ ಆಗಬೇಕು ಎಂದು ಅವರು ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular