Monday, April 14, 2025
Google search engine

Homeರಾಜ್ಯಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ವಿಧಿವಶ

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ವಿಧಿವಶ

ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಪಾಲರು ,ಕೇಂದ್ರದ ಮಾಜಿ ಸಚಿವರಾದ ಎಸ್ಎಂ ಕೃಷ್ಣ ಅವರು ಸದಾಶಿವನಗರದ ಸ್ವಗೃಹದಲ್ಲಿ ಇಂದು ಬೆಳಗಿನ ಜಾವ 2.30ರ ಸುಮಾರಿಗೆ ನಿಧನರಾದರು.

ಅವರಿಗೆ 92 ವರ್ಷ ವಯಸ್ಸಾಗಿತ್ತು. ಅವರು ಕಳೆದ ಆರು ತಿಂಗಳಿನಿಂದ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದರು. ಇತ್ತೀಚೆಗೆ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರಿಗೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.

ಎಸ್ಎಂ ಕೃಷ್ಣ ಅವರು ಮೂಲತಃ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದವರು. ಎಸ್ ಸಿ ಮಲ್ಲಯ್ಯ ಹಾಗೂ ತಾಯಮ್ಮ ದಂಪತಿಯ ಪುತ್ರನಾಗಿ ಮೇ 1, 1932 ರಲ್ಲಿ ಜನಿಸಿದ್ದರು.

2023 ನೇ ಸಾಲಿನ ಪದ್ಮ ವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು.

ವಿಧಾನಸಭೆ ಸ್ಪೀಕರ್, ಉಪಮುಖ್ಯಮಂತ್ರಿ, ವಿದೇಶಾಂಗ ವ್ಯವಹಾರಗಳ ಸಚಿವ ಹಾಗೂ ಮಹಾರಾಷ್ಟ್ರದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಶಿವನಗರದ ನಿವಾಸದಲ್ಲಿ ಮಂಗಳವಾರ ಇಡೀ ದಿನ ಇಡಲಾಗುವುದು . ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ಬುಧವಾರ ಬೆಳಗ್ಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.

RELATED ARTICLES
- Advertisment -
Google search engine

Most Popular