Sunday, April 20, 2025
Google search engine

Homeರಾಜಕೀಯಮತ್ತೆ ಬಿಜೆಪಿ ಸೇರ್ಪಡೆಗೊಂಡ ಮಾಜಿ ಸಿಎಂ ಜಗದೀಶ್ ಶೆಟ್ಟರ್

ಮತ್ತೆ ಬಿಜೆಪಿ ಸೇರ್ಪಡೆಗೊಂಡ ಮಾಜಿ ಸಿಎಂ ಜಗದೀಶ್ ಶೆಟ್ಟರ್

ನವದೆಹಲಿ: ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಹೈಕಮಾಂಡ್ ಜೊತೆ ಮುನಿಸಿಕೊಂಡು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತೆ ಮಾತೃ ಪಕ್ಷಕ್ಕೆ ವಾಪಾಸಾಗಿದ್ದಾರೆ.

ಇಂದು ಗುರುವಾರ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರನಾಯಕರನ್ನು ಭೇಟಿ ಮಾಡಿದ ನಂತರ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರ, ಕೇಂದ್ರ ಸಚಿವ ಭುಪೇಂದ್ರ ಯಾದವ್​, ರಾಜೀವ್​ ಚಂದ್ರಶೇಖರ್​ ಸಮ್ಮುಖದಲ್ಲಿ ಶೆಟ್ಟರ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ ತೊರೆದಿದ್ದಾರೆ.

ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಬಿ ವೈ ವಿಜಯೇಂದ್ರ ಈ ವಿಷಯ ತಿಳಿಸಿದ್ದಾರೆ.

ಕಾಂಗ್ರೆಸ್​ ಗೆ ರಾಜೀನಾಮೆ ನೀಡಿದ ಜಗದೀಶ್ ಶೆಟ್ಟರ್

ಪಕ್ಷ ಸೇರ್ಪಡೆಗೂ ಮುನ್ನ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷ ಹಾಗೂ ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಫ್ಯಾಕ್ಸ್ ಮೂಲಕ ರಾಜೀನಾಮೆ ಪತ್ರ ರವಾನಿಸಿದ್ದಾರೆ. ರಾಜೀನಾಮೆಗೂ ಮುನ್ನ ಶೆಟ್ಟರ್ ಅವರು ಹೊರಟ್ಟಿಗೆ ಕರೆ ಮಾಡಿ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದರು. ಈ ವೇಳೆ ಪತ್ರದ ಮೂಲಕ ಬೇಡ, ನೇರವಾಗಿ ಬಂದು ರಾಜೀನಾಮೆ ನೀಡುವಂತೆ ಸೂಚಿಸಿದ್ದರು.

ಕಾಂಗ್ರೆಸ್​ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ

ಪಕ್ಷ ಸೇರ್ಪಡೆ ನಂತರ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಶೆಟ್ಟರ್, ನಾನು ಪಕ್ಷಕ್ಕೆ ವಾಪಸಾಗಬೇಕೆಂದು ನಾಯಕರ ಅಪೇಕ್ಷೆ ಇತ್ತು. ಅಮಿತ್​ ಶಾ ಅವರು ಅತ್ಯಂತ ಗೌರವದಿಂದ ಬರಮಾಡಿಕೊಂಡರು. ನಾನು ಬಿಜೆಪಿ ಮರು ಸೇರ್ಪಡೆಯಾಗಿದ್ದಕ್ಕೆ ಬಹಳ ಸಂತಸ ಆಗಿದೆ. ನಾನು ಪರಿಷತ್​ ಸ್ಥಾನಕ್ಕೆ ರಾಜೀನಾಮೆಯನ್ನೂ ಸಲ್ಲಿಸಿದ್ದೇನೆ. ಕಾಂಗ್ರೆಸ್​ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದೇನೆ. ಇ-ಮೇಲ್​ ಮೂಲಕ ರಾಜೀನಾಮೆಯನ್ನ ನೀಡಿದ್ದೇನೆ ಎಂದರು.

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ​ಗೆ ಧನ್ಯವಾದ

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಬೇಕು. ನಾನು ಪಕ್ಷಕ್ಕೆ ನಿಷ್ಠನಾಗಿ ಕೆಲಸ ಮಾಡುತ್ತೇನೆ. ಕಾಂಗ್ರೆಸ್​ನವರು ಕೂಡ ಒಳ್ಳೇ ಗೌರವ, ಸ್ಥಾನಮಾನ ನೀಡಿದ್ದರು. ಕಾಂಗ್ರೆಸ್​ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್​ಗೆ ಧನ್ಯವಾದ ತಿಳಿಸುತ್ತೇನೆ ಎಂದರು.

RELATED ARTICLES
- Advertisment -
Google search engine

Most Popular