ವರದಿ :ಸ್ಟೀಫನ್ ಜೇಮ್ಸ್.
ಇಂದು ಅಂತ್ಯಕ್ರಿಯೆ
ಭೀಮಣ್ಣ ಖಂಡ್ರೆ ಅಂತಿಮ ದರ್ಶನ ಹಾಗೂ ಅಂತ್ಯಕ್ರಿಯೆ ಇಂದೇ ನಡೆಯಲಿದೆ ಎಂದು ಅವರ ಪುತ್ರರಾಗಿರುವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಭಾಲ್ಕಿಯ ಗಾಂಧಿ ಗಂಜ್ನಲ್ಲಿರುವ ಸ್ವಗೃಹದ ಆವರಣದಲ್ಲಿ ಇಂದು ಮಧ್ಯಾಹ್ನದವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಸಿಎಂ ಸಂತಾಪ
ಭೀಮಣ್ಣ ಖಂಡ್ರೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ,ಡಿಸಿಎಂ ಡಿ ಕೆ ಶಿವಕುಮಾರ್ ಸೇರಿದಂತೆ ಹಲವು ರಾಜಕೀಯ ನಾಯಕರು, ಗಣ್ಯರು ಸಂತಾಪ ಸೂಚಿಸಿದ್ದಾರೆ. ಎಕ್ಸ್ ಸಂದೇಶದಲ್ಲಿ ಅವರು, ಮಾಜಿ ಸಚಿವರು, ನಾಡಿನ ಹಿರಿಯ ರಾಜಕಾರಣಿಗಳು ಆದ ಭೀಮಣ್ಣ ಖಂಡ್ರೆಯವರ ನಿಧನದಿಂದ ದುಃಖಿತನಾಗಿದ್ದೇನೆ. ಶರಣ ಚಿಂತನೆಗಳ ನೆರಳಂತೆ ಬಾಳಿದ ಧೀಮಂತ ನಾಯಕನ ನಿಧನದಿಂದ ನಾಡಿಗೆ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದ್ದಾರೆ.



