Friday, April 18, 2025
Google search engine

Homeಸ್ಥಳೀಯಕೆರೆ ತುಂಬಿಸುವ ಯೋಜನೆಗೆ ತಾತ್ಕಾಲಿಕ ತಡೆ ತೆರವುಗೊಳಿಸಲು ಮಾಜಿ ಶಾಸಕ ಮನವಿ

ಕೆರೆ ತುಂಬಿಸುವ ಯೋಜನೆಗೆ ತಾತ್ಕಾಲಿಕ ತಡೆ ತೆರವುಗೊಳಿಸಲು ಮಾಜಿ ಶಾಸಕ ಮನವಿ


ಹುಣಸೂರು: ಹುಣಸೂರು ತಾಲ್ಲೂಕಿನ ಮರದೂರು ಗ್ರಾಮದ ಬಳಿ ಲಕ್ಷ್ಮಣ ತೀರ್ಥ ನದಿಯಿಂದ ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿ ವ್ಯಾಪ್ತಿಯ ೪೭ ಕೆರೆ ಕಟ್ಟೆಗಳ ಕುಡಿಯುವ ನೀರಿಗಾಗಿ ನೀರು ತುಂಬಿಸುವ ಯೋಜನೆಗೆ ನೀಡಿರುವ ತಾತ್ಕಾಲಿಕ ತಡೆಯನ್ನು ತೆರವು ಮಾಡಿ ಯೋಜನೆ ಪ್ರಾರಂಭಿಸಲು ಸಂಬಂದಪಟ್ಟ ಇಲಾಖೆ ಅಧಿಕಾರಿಗಳಿಗೆ ಆದೇಶಿಸಬೇಕೆಂದು ಉಪಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಇಲಾಖೆ ಸಚಿವ ಡಿ. ಕೆ ಶಿವಕುಮಾರ್ ಅವರಿಗೆ ಬೆಂಗಳೂರಿನ ವಿಧಾನಸೌಧದಲ್ಲಿ ಹುಣಸೂರಿನ ಮಾಜಿ ಶಾಸಕ ಎಚ್ ಪಿ ಮಂಜುನಾಥ್ ಮನವಿ ಸಲ್ಲಿಸಿದರು.
ವಿಧಾನಸಭಾ ಚುನಾವಣೆಯಲ್ಲಿ ಅಲ್ಪ ಮತಗಳಿಂದ ಸೋತಿದ್ದರೂ, ತಾಲೂಕಿನ ಅಭಿವೃದ್ಧಿ ಕಾರ್ಯಗಳನ್ನು ಮಾತ್ರ ಛಲ ಬಿಡದ ಛಲದಂಕ ಮಲ್ಲನಂತೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಂಬಂದಪಟ್ಟ ಸಚಿವರ ಬೆನ್ನ ಹಿಂದೆ ಬಿದ್ದು ಅರೆ -ಬರೆಕೊಂಡಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅನುದಾನ ಬಿಡುಗಡೆಗೆ ಮುಂದಾಗಿರುವ ಹುಣಸೂರಿನ ಮನೆ ಮಗ ಸ್ನೇಹ ಜೀವಿ ಹೆಚ್ ಪಿ ಮಂಜುನಾಥ್ ರವರು ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿ ವ್ಯಾಪ್ತಿಯ ೪೭ ಕೆರೆಗಳಿಗೆ ಲಕ್ಷ್ಮಣತೀರ್ಥ ನದಿಯಿಂದ ಏತ ನೀರಾವರಿ ಮೂಲಕ ನೀರು ತುಂಬಿಸುವ ಯೋಜನೆಗೆ ಈ ಹಿಂದೆ ಟೆಂಡರ್ ಪ್ರಕ್ರಿಯೆ ನಡೆದಿತ್ತು ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಹುಣಸೂರು ತಾಲ್ಲೂಕಿನ ಲಕ್ಷ್ಮಣ ತೀರ್ಥ ನಧಿಯಿಂದ ಮರದೂರು ಬಳಿ ಹುಣಸೂರು ತಾಲ್ಲೂಕಿನ ೪೭ ಕೆರೆಗಳಿಗೆ ೮೫ ಕೋಟಿ ರೂ ಯೋಜನಾ ವೆಚ್ಚ ದಲ್ಲಿ ಏತನೀರಾವರಿ ಮುಖಾಂತರ ನೀರು ತುಂಬಿಸುವ ಯೋಜನೆಗೆ ಈ ಹಿಂದೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಕಾಮಗಾರಿ ಟೆಂಡರ್ ಪ್ರಕ್ರಿಯೆ ಹಂತದಲ್ಲಿರುತ್ತದೆ .
ಆದರೆ ಸಾರ್ವತ್ರಿಕವಾಗಿ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಪ್ರಾರಂಭವಾಗದಿರುವ ಕಾಮಗಾರಿಗಳಿಗೆ ತಡೆಹಿಡಿಯುವಂತೆ ಸರ್ಕಾರ ಆದೇಶಿಸಿರುತ್ತದೆ. ಈ ಹಿನ್ನಲೆಯಲ್ಲಿ ಮೆಲ್ಕಂಡ ಹುಣಸೂರು ತಾಲೂಕಿನ ಮರದೂರು ಏತ ನೀರಾವರಿ ಯೋಜನೆಯ ಅನುಷ್ಟಾನ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿರುತ್ತದೆ. ಈ ಯೋಜನೆಯಿಂದ ಹುಣಸೂರು ತಾಲ್ಲೂಕಿನ ೩೦ ಹಳ್ಳಿಗಳ ಮಳೆ ಆಶ್ರಿತ ಪ್ರದೇಶದ ಅರ್ಧದಷ್ಟು ಭಾಗಕ್ಕೆ ಜನ ಜಾನುವಾರುಗಳಿಗೆ ಕುಡಿಯಲು ನೀರಿಗಾಗಿ ಮತ್ತು ಅಂತರ್ಜಲ ಮಟ್ಟದ ಸುದಾರಣೆಗೆ ಅನುಕೂಲವಾಗಲಿದ್ದು ಯೋಜನೆಯ ಪ್ರಸ್ತಾವನೆ ಹಾಗೂ ಅನುಮೋದನೆಗಾಗಿ ನಾನು ಕಳೆದ ಹತ್ತು ವರ್ಷಗಳಿಂದ ಪ್ರಯತ್ನಿಸಿರುತ್ತೇನೆ. ಪ್ರಸ್ತುತ ಸರ್ಕಾರದಲ್ಲಿ ಅನುಮೋದನೆ ದೊರೆತಿರುವುದು ಸದರಿ ಭಾಗದ ರೈತರಲ್ಲಿ ವಿಶ್ವಾಸವನ್ನು ಹೆಚ್ಚಿಸಿದ್ದು, ಬೆಳೆ ಬೆಳೆಯುಲು ಅದರ ಫಲವನ್ನು ಅನುಭವಿಸಲು ರೈತರು ಕಾಯುತ್ತಿದ್ದು ಕಾರ್ಯಕ್ರಮವನ್ನು ಶೀರ್ಘ ಅನುಷ್ಟಾನದ ಅವಶ್ಯಕತೆ ಇದೆ.
ಈ ಹಿನ್ನಲೆಯಲ್ಲಿ ಸರ್ಕಾರ ನೀಡಿರುವ ತಾತ್ಕಾಲಿಕ ತಡೆಯನ್ನು ಹಿಂಪಡೆದು ಯೋಜನೆಯನ್ನು ಅನುಷ್ಟಾನ ಗೊಳಿಸಲು ಸಂಬಂಧಿಸಿದ ಇಲಾಖೆಗೆ ಆದೇಶಿಸಬೇಕೆಂದು ಈ ಮೂಲಕ ಕೋರುತ್ತೇನೆ ಎಂದು ಉಪಮುಖ್ಯಮಂತ್ರಿಹಾಗೂ ಜಲ ಸಂಪನ್ಮೂಲ ಇಲಾಖೆ ಸಚಿವರಾದ ಡಿಕೆ ಶಿವಕುಮಾರ್ ರವರಿಗೆ ಹುಣಸೂರಿನ ಮಾಜಿ ಶಾಸಕ ಎಚ್ ಪಿ. ಮಂಜುನಾಥ್ ಮನವಿ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular