Thursday, April 3, 2025
Google search engine

Homeವಿದೇಶಭ್ರಷ್ಟಾಚಾರ ಪ್ರಕರಣ: ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ 14 ವರ್ಷ, ಪತ್ನಿಗೆ 7 ವರ್ಷ...

ಭ್ರಷ್ಟಾಚಾರ ಪ್ರಕರಣ: ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ 14 ವರ್ಷ, ಪತ್ನಿಗೆ 7 ವರ್ಷ ಜೈಲು ಶಿಕ್ಷೆ

ಇಸ್ಲಾಮಾಬಾದ್‌: ಅಲ್-ಖಾದಿರ್ ಟ್ರಸ್ಟ್‌ಗೆ ಸಂಬಂಧಿಸಿದ ಭೂ ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನ ನ್ಯಾಯಾಲಯವು ಮಾಜಿ ಪ್ರಧಾನಿ ಇಮ್ರಾನ್​ ಖಾನ್​ ಹಾಗೂ ಪತ್ನಿ ಬುಶ್ರಾ ಬೀಬಿಯನ್ನು ದೋಷಿ ಎಂದು ತೀರ್ಪು ನೀಡಿ ಮಾಜಿ ಪ್ರಧಾನಿ ಇಮ್ರಾನ್‌ ಖಾನ್ ಅವರಿಗೆ 14 ವರ್ಷ ಜೈಲು ಮತ್ತು ಅವರ ಪತ್ನಿ ಬುಶ್ರಾ ಬೀಬಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಇಮ್ರಾನ್ ಖಾನ್ ಪತ್ನಿ ಬುಶ್ರಾ ಬೀಬಿಗೆ 7 ಲಕ್ಷ ರೂ. ಇಮ್ರಾನ್ ಖಾನ್ ಗೆ 10 ಲಕ್ಷ ರೂಪಾಯಿ ದಂಡವನ್ನೂ ವಿಧಿಸಲಾಗಿದೆ. ಇಬ್ಬರೂ ದಂಡ ಪಾವತಿಸಲು ಸಾಧ್ಯವಾಗದಿದ್ದರೆ ಆರು ತಿಂಗಳ ಜೈಲು ಶಿಕ್ಷೆ ಮತ್ತು ಬುಶ್ರಾ ಮೂರು ತಿಂಗಳ ಜೈಲು ಶಿಕ್ಷೆಯನ್ನು ಹೆಚ್ಚುವರಿಯಾಗಿ ಅನುಭವಿಸಬೇಕಾಗುತ್ತದೆ.

ಇಮ್ರಾನ್‌ ಖಾನ್‌ ಮೇಲಿದ್ದ ಆರೋಪ ಸಾಬೀತಾದ ಬೆನ್ನಲ್ಲೇ ಇಂದು ರಾವಲ್ಪಿಂಡಿಯಲ್ಲಿರುವ ಭ್ರಷ್ಟಾಚಾರ ವಿರೋಧಿ ನ್ಯಾಯಾಲಯವು ತೀರ್ಪನ್ನು ಪ್ರಕಟಿಸಿತು.

ಏನಿದು ಪ್ರಕರಣ?

ಇಮ್ರಾನ್ ಖಾನ್​​ನ್ನು ಅಲ್-ಖಾದಿರ್ ಟ್ರಸ್ಟ್‌ಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿಸಲಾಗಿದೆ. ತಮ್ಮ ಅಧಿಕಾರಾವಧಿಯಲ್ಲಿ ಪಂಜಾಬ್‌ನ ಝೀಲಂನಲ್ಲಿ ಗುಣಮಟ್ಟದ ಶಿಕ್ಷಣವನ್ನು ಒದಗಿಸಲು ವಿಶ್ವವಿದ್ಯಾಲಯ ಸ್ಥಾಪನೆ ಮಾಡುವುದಾಗಿ ಇಮ್ರಾನ್‌ ಖಾನ್‌ ಭರವಸೆ ನೀಡಿದ್ದರು.

ಈ ಭರವಸೆಯ ಭಾಗವಾಗಿ ಖಾನ್ ಅಲ್-ಖಾದಿರ್ ಯೂನಿವರ್ಸಿಟಿ ಪ್ರಾಜೆಕ್ಟ್ ಟ್ರಸ್ಟ್ ಸ್ಥಾಪಿಸಿದ್ದರು. ಅದರಲ್ಲಿ ಬೀಬಿ, ಆಪ್ತ ಸಹಾಯಕರಾಗಿದ್ದ ಬುಖಾರಿ ಮತ್ತು ಬಾಬರ್‌ ಅವರನ್ನು ಪದಾಧಿಕಾರಿಗಳಾಗಿ ನೇಮಿಸಲಾಗಿತ್ತು. ಈ ಸಂಬಂಧ ಆಗಿನ ಪಿಟಿಐ ಸರ್ಕಾರ ಮತ್ತು ಆಸ್ತಿ ಉದ್ಯಮಿ ನಡುವೆ ಒಪ್ಪಂದ ಮಾಡಿಕೊಂಡಿತ್ತು. ಈ ಒಪ್ಪಂದಿಂದ ದೇಶದ ಖಜಾನೆಗೆ 190 ಮಿಲಿಯನ್ ಪೌಂಡ್‌ಗಳ ನಷ್ಟವಾಗಿದೆ. ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲು 458 ಎಕರೆಗೂ ಹೆಚ್ಚು ಭೂಮಿ ಪಡೆದು ಲಾಭವನ್ನು ಪಡೆದ ಆರೋಪ ಇಮ್ರಾನ್‌ ಖಾನ್‌ ಮೇಲಿದೆ.

RELATED ARTICLES
- Advertisment -
Google search engine

Most Popular