Friday, April 4, 2025
Google search engine

Homeಸ್ಥಳೀಯಮುಡಾ ಮಾಜಿ ಅಧ್ಯಕ್ಷ ಪಿ.ಗೋವಿಂದರಾಜು ನಿಧನ

ಮುಡಾ ಮಾಜಿ ಅಧ್ಯಕ್ಷ ಪಿ.ಗೋವಿಂದರಾಜು ನಿಧನ

ಮೈಸೂರು : ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಆಪ್ತ, ಮುಡಾ ಮಾಜಿ ಅಧ್ಯಕ್ಷ ಹಾಗೂ ಉದ್ಯಮಿ ಪಿ.ಗೋವಿಂದರಾಜು(೭೫) ಬುಧವಾರ ಮಧ್ಯಾಹ್ನ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೈಸೂರಿನಿಂದ ಬನ್ನೂರು ಬಳಿ ಇರುವ ತಮ್ಮ ತೋಟಕ್ಕೆ ಕಾರಿನಲ್ಲಿ ಹೋಗಿ ವಾಪಸ್ ಬರುವ ವೇಳೆ ಕಾರಿನಲ್ಲಿ ಅಸ್ವಸ್ಥರಾಗಿದ್ದಾರೆ. ತಕ್ಷಣ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆದೊಯ್ಯಲಾಗಿದ್ದು ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ.

ಮೃತರು ಪತ್ನಿ, ಓರ್ವ ಪುತ್ರ, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಪಾರ್ಥೀವ ಶರೀರ ಅವರ ಮೈಸೂರಿನ ಸ್ವಗೃಹ ಸಿದ್ಧಾರ್ಥ ಲೇಔಟ್ ನಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದ್ದು, ಗುರುವಾರ ಮಧ್ಯಾಹ್ನ ೩ ಗಂಟೆ ಬನ್ನೂರಿನ ರಂಗಾಚಾರ್ಲು ಹುಂಡಿಯಲ್ಲಿರುವ ಅವರ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಪಿ.ಗೋವಿಂದ ರಾಜು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಬಂಗಾರಪ್ಪ ಅವರಿಗೆ ಆತ್ಮೀಯರಾಗಿದ್ದರು. ಬಂಗಾರಪ್ಪ ಅವರ ಮಾರ್ಗದರ್ಶನದಲ್ಲೇ ರಾಜಕಾರಣದಲ್ಲಿ ತೊಡಗಿಸಿ ಕೊಂಡಿದ್ದ ಅವರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಬಂಗಾರಪ್ಪ ಅವರು ಮೈಸೂರಿಗೆ ಬಂದಾಗಲೆಲ್ಲಾ ಇವರ ಹೋಟೆಲ್ ನಲ್ಲೇ ತಂಗುತ್ತಿದ್ದರು. ಜೊತೆಗೆ ಬಂಗಾರಪ್ಪ ಕುಟುಂಬದವರು ಇವರ ಜೊತೆ ಉತ್ತಮ ಬಾಂಧವ್ಯವನ್ನು ಹೊಂದಿದ್ದಾರೆ.

ದಿವಂಗತ ನಾಯಕ ನಟ ಡಾ.ರಾಜ್ ಕುಮಾರ್ ಅವರ ಕುಟುಂಬದವರೊಂದಿಗೂ ಆತ್ಮೀಯತೆಯನ್ನು ಹೊಂದಿದ್ದ ಇವರು ಈಡಿಗ ಸಮುದಾಯದ ಶ್ರೇಯೋಭಿವೃದ್ಧಿಗಾಗಿ ಸದಾ ಕೆಲಸ ಮಾಡುತ್ತಿದ್ದರು. ಮೃತರ ಸಹೋದರ ಮಾಜಿ ನಗರ ಪಾಲಿಕೆ ಸದಸ್ಯ ಪಿ.ದೇವರಾಜ್, ಇವರ ಬಾವಮೈದ ನಗರ ಪಾಲಿಕೆ ಮಾಜಿ ಸದಸ್ಯ ಆರ್.ಧ್ರುವರಾಜ್ ಕೂಡ ರಾಜಕಾರಣದಲ್ಲಿದ್ದಾರೆ. ಮಾಜಿ ಶಾಸಕ ಎಲ್.ನಾಗೇಂದ್ರ, ಶಾಸಕ ದರ್ಶನ್ ಧ್ರುವನಾರಾಯಣ, ನಟ ರಾಘವೇಂದ್ರ ರಾಜ್ ಕುಮಾರ್ ಅವರ ಪತ್ನಿ ಮೃತರ ಅಂತಿಮ ದರ್ಶನ ಪಡೆದರು.

RELATED ARTICLES
- Advertisment -
Google search engine

Most Popular