ಹೊಸದಿಲ್ಲಿ: ಮಾಜಿ ಪ್ರಧಾನಿ ಮನಮೋಹನ ಸಿಂಗ್ ಸೇರಿದಂತೆ ೫೪ ಮಂದಿ ರಾಜ್ಯಸಭಾ ಸದಸ್ಯರ ಅಧಿಕಾರಾವಧಿ ಮುಕ್ತಾಯಗೊಂಡಿದೆ.
ಸಂಸತ್ತಿನ ಮೇಲ್ಮನೆಯಲ್ಲಿ ೩೩ ವರ್ಷಗಳ ಸುಧೀರ್ಘ ಸೇವೆ ಸಲ್ಲಿಸಿದ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ಅಧಿಕಾರಾವಧಿ ಇಂದು ಬುಧವಾರ ಮುಕ್ತಾಯವಾಗುತ್ತಿದ್ದು, ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾಗಾಂಧಿ ಇದೇ ಮೊದಲ ಬಾರಿಗೆ ರಾಜ್ಯಸಭೆ ಪ್ರವೇಶಿಸುತ್ತಿದ್ದಾರೆ.
ದೇಶದ ಆರ್ಥಿಕ ಸುಧಾರಣೆಗಳ ದಿಟ್ಟ ಹೆಜ್ಜೆ ಕೈಗೊಂಡು, ಆಧುನಿಕ ಭಾರತದ ಆರ್ಥಿಕತೆಯ ರೂವಾರಿ ಎನಿಸಿದ್ದ ಸಿಂಗ್, ೧೯೯೧ರ ಅಕ್ಟೋಬರ್‍ನಲ್ಲಿ ಮೊದಲ ಬಾರಿಗೆ ರಾಜ್ಯಸಭೆ ಪ್ರವೇಶಿಸಿದರು. ಅವರು ೧೯೯೧ರಿಂದ ೧೯೯೬ರವರೆಗೆ ನರಸಿಂಹ ರಾವ್ ಸಂಪುಟದಲ್ಲಿ ಹಣಕಾಸು ಸಚಿವರಾಗಿದ್ದರು. ಬಳಿಕ ೨೦೦೪ ರಿಂದ ೨೦೧೪ರವರೆಗೆ ದೇಶದ ಪ್ರಧಾನಿಯಾಗಿದ್ದರು.
ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಆರೋಗ್ಯ ಸಚಿವ ಮನ್‌ಸುಖ್ ಮಾಂಡವಿಯಾ, ಪಶುಪಾಲನೆ ಮತ್ತು ಮೀನುಗಾರಿಕಾ ಸಚಿವ ಪುರುಷೋತ್ತಮ್ ರೂಪಾಲಾ, ಮಾಹಿತಿ ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್, ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವ ವಿ. ಮುರಳೀಧರನ್, ಎಂಎಸ್‌ಎಂಇ ಸಚಿವ ನಾರಾಯಣ ರಾಣೆ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯಸಚಿವ ಎಲ್.ಮುರುಗನ್ ಅಧಿಕಾರಾವಧಿ ಏಪ್ರಿಲ್ ೨ರಂದು ಮುಕ್ತಾಯಗೊಂಡಿದೆ ಪರಿಸರ ಖಾತೆ ಸಚಿವ ಭೂಪೇಂದ್ರ ಯಾದವ್ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ಅಧಿಕಾರಾವಧಿ ೩ರಂದು ಮುಕ್ತಾಯವಾಗುತ್ತಿದೆ.



