ಮಂಗಳೂರು(ದಕ್ಷಿಣ ಕನ್ನಡ): ಬಿಜೆಪಿ ವಿರುದ್ಧ ಉಡುಪಿ ಮಾಜಿ ಶಾಸಕ ಕೆ.ರಘುಪತಿ ಭಟ್ ಬಂಡಾಯವೆದ್ದಿದ್ದು, ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ನಿರ್ಧರಿಸಿದ್ದಾರೆ.
ಮಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ರಘುಪತಿ ಭಟ್, ಶಾಸಕ ಅವಧಿಯಲ್ಲಿ ತಾನು ಮಾಡಿದ ಕಾರ್ಯದ ಬಗ್ಗೆ ಮಾತನಾಡಿದರು.
ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ತನ್ನನ್ನು ಬೆಂಬಲಿಸುವಂತೆ ಮನವಿ ಮಾಡಿದರು.
ಉಡುಪಿಯ ಅಭಿವೃದ್ಧಿಯಲ್ಲಿ ತನ್ನ ಪಾತ್ರ ಇದೆ. ಆರೋಗ್ಯ, ಶೈಕ್ಷಣಿಕ ಕ್ಷೇತ್ರದಲ್ಲಿ ತಾನು ಸಾಧನೆ ಮಾಡಿದ್ದೇನೆ. ಶಾಸಕನಾಗಿ ಮಾಡಬೇಕಾದ ಕೆಲಸಗಳನ್ನು ನಾನು ಮಾಡಿದ್ದೇನೆ. ಆದರೆ ಕೊನೆಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನಗೆ ಟಿಕೆಟನ್ನು ನಿರಾಕರಿಸಲಾಯಿತು. ನನ್ನನ್ನು ನಡೆಸಿಕೊಂಡ ರೀತಿ ನನಗೆ ಬೇಸರ ಮೂಡಿಸಿತು ಎಂದು ಉಡುಪಿ ಮಾಜಿ ಶಾಸಕ ಕೆ.ರಘುಪತಿ ಭಟ್ ಹೇಳಿದರು.
ನನಗೆ ಟಿಕೆಟ್ ನಿರಾಕರಿಸಲಾಯಿತು.