ವರದಿ :ಸ್ಟೀಫನ್ ಜೇಮ್ಸ್.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಇರಿದ ನಾಲ್ವರು ಆರೋಪಿಗಳ ಸೆರೆಕಾರು ಚಾಲಕ ಬಸವಂತ ಕಡಲೇಕರ್ ಸ್ನೇಹಿತ ಮದನ್ ಈ ಕುರಿತು ದೂರು ನೀಡಿದ್ದರು. ಬೆಳಗಾವಿಯ ಕ್ಯಾಂಪ್ ಠಾಣೆಯಲ್ಲಿ ನಾಲ್ವರ ವಿರುದ್ಧ ದೂರು ದಾಖಲಿಸಿದ್ದರು. ಮದನ್ ನೀಡಿದ ದೂರಿನ ಮೇಲೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಭೂಷಣ್ ಬೋರಸೆ ತಿಳಿಸಿದರು. ಜನವರಿ 6ರಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಕಾರು ಚಾಲಕ ಬಸವಂತಗೆ ಚಾಕು ಇರಿದು ಎಸ್ಕೇಪ್ ಆಗಿದ್ದರು.ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನ ಹತ್ಯೆಗೆ ಯತ್ನಿಸಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಾಕು ಇರಿದು ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ಆರೆಸ್ಟ್ ಮಾಡಲಾಗಿದೆ ಎಂದು ಬೆಳಗಾವಿ ಪೊಲೀಸ್ ಕಮಿಷನರ್ ಭೂಷಣ್ ಬೋರಸೆ ಹೇಳಿಕೆ ನೀಡಿದ್ದಾರೆ. ಬಂಧಿತ ಆರೋಪಿಗಳನ್ನು ಶಿವಯ್ಯ ಪೂಜಾರಿ, ನಿತೇಶ್ ಬಡಿಗೇರ್, ಮೋನಪ್ಪ ಮತ್ತು ಸಂಪತ್ ಎಂದು ಗುರುತಿಸಲಾಗಿದೆ.ಕಾರು ಚಾಲಕ ಬಸವಂತ ಕಡಲೇಕರ್ ಸ್ನೇಹಿತ ಮದನ್ ಈ ಕುರಿತು ದೂರು ನೀಡಿದ್ದರು. ಬೆಳಗಾವಿಯ ಕ್ಯಾಂಪ್ ಠಾಣೆಯಲ್ಲಿ ನಾಲ್ವರ ವಿರುದ್ಧ ದೂರು ದಾಖಲಿಸಿದ್ದರು. ಮದನ್ ನೀಡಿದ ದೂರಿನ ಮೇಲೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಭೂಷಣ್ ಬೋರಸೆ ತಿಳಿಸಿದರು. ಜನವರಿ 6ರಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಕಾರು ಚಾಲಕ ಬಸವಂತಗೆ ಚಾಕು ಇರಿದು ಎಸ್ಕೇಪ್ ಆಗಿದ್ದರು.ವರದಿ ಮೂಲಗಳ ಪ್ರಕಾರ, ಬಸವಂತ ಅವರು ಕಾರನ್ನು ನಿಲ್ಲಿಸಿ ಕೆಳಗೆ ನಿಂತಿದ್ದ ಸಂದರ್ಭದಲ್ಲಿ, ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಚಾಕುವಿನಿಂದ ದಾಳಿ ನಡೆಸಿದ್ದಾರೆ. ಆರೋಪಿಗಳು ಎದೆ, ಭುಜ ಹಾಗೂ ತೊಡೆ ಸೇರಿ ನಾಲ್ಕು ಕಡೆ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ಬಸವಂತ ಅವರನ್ನು ತಕ್ಷಣವೇ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ವೈದ್ಯರು ಅವರ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿಸಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ.ಹಲ್ಲೆಗೊಳಗಾದ ಬಸವಂತ ಆರೋಪಿಗಳ ಸುಳಿವು ನೀಡಿದ್ದರು. ಮೈನಿಂಗ್ ವಿಚಾರದಲ್ಲಿ ದ್ವೇಷ ಹೊಂದಿರುವವರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ಇವರು ಮೈನಿಂಗ್ ವಿಚಾರಕ್ಕೆ ಪದೇಪದೆ ಜಗಳ ತೆಗೆಯುತ್ತಿದ್ದರು. ಗೋಜಗಾ ಗ್ರಾಮದ ಶಿವಯ್ಯ ಪೂಜಾರಿ, ಪರಶುರಾಮ ಮತ್ತು ಮೋನಪ್ಪ ಪಾಟೀಲ್ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹೇಳಿದ್ದರು.



