ಮುಂಬೈ: ಹಾಸ್ಯನಟ ಕಪಿಲ್ ಶರ್ಮಾ ಸೇರಿದಂತೆ ನಾಲ್ವರು ಸೆಲೆಬ್ರಿಟಿಗಳಿಗೆ ಇಮೇಲ್ ಮೂಲಕ ಜೀವ ಬೆದರಿಕೆ ಬಂದಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನೆ ಕುರಿತು ಹೇಳಿಕೆ ನೀಡಿದ ಮುಂಬೈ ಪೊಲೀಸರು ಕಪಿಲ್ ಶರ್ಮಾ ಅವರಿಗೆ ಇಮೇಲ್ ಮೂಲಕ ಜೀವ ಬೆದರಿಕೆ ಬಂದಿದ್ದು ಇದಕ್ಕೂ ಮೊದಲು ನಟ ರಾಜ್‌ಪಾಲ್ ಯಾದವ್, ನೃತ್ಯ ನಿರ್ದೇಶಕ ರೆಮೊ ಡಿಸೋಜಾ ಮತ್ತು ಗಾಯಕಿ, ಹಾಸ್ಯನಟಿ ಸುಗಂಧ ಮಿಶ್ರಾ ಅವರಿಗೂ ಇ ಮೇಲ್ ಮೂಲಕ ಜೀವ ಬೆದರಿಕೆ ಬಂದಿದ್ದು ಈ ಕುರಿತು ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ ಎಂದು ಹೇಳಿದ್ದಾರೆ.
‘don99284@gmail.com’ ಎಂಬ ಐಡಿಯಿಂದ ನಾಲ್ವರು ಸೆಲೆಬ್ರಿಟಿಗಳಿಗೆ ಜೀವ ಬೆದರಿಕೆ ಬಂದಿದ್ದು ಅದರಲ್ಲಿ ಬರೆದಿರುವಂತೆ, ನಾವು ಪ್ರಚಾರಕ್ಕಾಗಿ ಮಾಡುತ್ತಿಲ್ಲ. ನಿಮ್ಮ ಎಲ್ಲಾ ಚಟುವಟಿಕೆಗಳ ಬಗ್ಗೆ ನಮಗೆ ಮಾಹಿತಿ ಇದೆ. ಮುಂದಿನ 8 ಗಂಟೆಗಳಲ್ಲಿ ನಿಮ್ಮಿಂದ ತ್ವರಿತ ಪ್ರತಿಕ್ರಿಯೆಯನ್ನು ನಾವು ನಿರೀಕ್ಷಿಸುತ್ತೇವೆ. ನಮಗೆ ಯಾವುದೇ ಉತ್ತರ ಸಿಗದಿದ್ದರೆ ನೀವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ನಾವು ಭಾವಿಸುತ್ತೇವೆ ಎಂದು ಎಂದು ಇಮೇಲ್ ನಲ್ಲಿ ಬೆದರಿಕೆ ಹಾಕಲಾಗಿದೆ.
ಸೆಲೆಬ್ರಿಟಿಗಳಿಗೆ ಬೆದರಿಕೆ ಇಮೇಲ್ ಬರುತ್ತಿರುವುದು ಇದೇ ಮೊದಲಲ್ಲ. ಸಲ್ಮಾನ್ ಖಾನ್ ಸೇರಿದಂತೆ ಹಲವು ಸೆಲೆಬ್ರಿಟಿಗಳಿಗೆ ಜೀವ ಬೆದರಿಕೆಗಳು ಬಂದಿದ್ದೂ ಸದ್ಯ ಸಲ್ಮಾನ್ ಖಾನ್ ಹೆಚ್ಚಿನ ಭದ್ರತೆ ಒದಗಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದು, ಕಪಿಲ್ ಶರ್ಮಾ ಸೇರಿದಂತೆ ನಾಲ್ವರು ಸೆಲೆಬ್ರಿಟಿಗಳಿಗೆ ಬೆದರಿಕೆ ಬಂದಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು ಇಮೇಲ್ ಮೂಲ ಪಾಕಿಸ್ತಾನ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದ್ದು ಹೆಚ್ಚಿನ ಕಾರ್ಯಾಚರಣೆಗೆ ತಂಡ ರಚನೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.