ಬೆಂಗಳೂರು: ರಾಜ್ಯದಲ್ಲಿ ಕೋವಿಡ್-೧೯ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕೊರೋನಾದಿಂದ ನಾಲ್ವರು ಮೃತಪಟ್ಟಿದ್ದಾರೆ ಮತ್ತು ೨೯೮ ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ೧೨೪೦ಕ್ಕೆ ಏರಿಕೆಯಾಗಿದೆ. ಜತೆಗೆ ಕೋವಿಡ್‌ನಿಂದ ೨೨೯ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ೨೪ ಗಂಟೆಗಳಲ್ಲಿ ೭,೭೯೧ ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ. ಪಾಸಿಟಿವಿಟಿ ದರ ಶೇ. ೩.೮೨ ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸೋಂಕಿತರಲ್ಲಿ ೧,೧೬೮ ಮಂದಿ ಮನೆ ಆರೈಕೆಗೆ ಒಳಗಾದರೆ, ೭೨ ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ೯ ಸೋಂಕಿತರು ತೀವ್ರ ನಿಗಾ ಘಟಕದಲ್ಲಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾದಿಂದ ಇಬ್ಬರು ಮೃತಪಟ್ಟಿದ್ದು, ೧೭೨ ಮಂದಿಗೆ ಪಾಸಿಟಿವ್ ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.