Monday, January 19, 2026
Google search engine

Homeಸ್ಥಳೀಯಇಂದಿರಾ ಪ್ರಿಯದರ್ಶಿನಿ ಮೃಗಾಲಯದಲ್ಲಿ ನಾಲ್ಕು ಚುಕ್ಕಿ ಜಿಂಕೆ ಸಾವು

ಇಂದಿರಾ ಪ್ರಿಯದರ್ಶಿನಿ ಮೃಗಾಲಯದಲ್ಲಿ ನಾಲ್ಕು ಚುಕ್ಕಿ ಜಿಂಕೆ ಸಾವು

ದಾವಣಗೆರೆ : ಚುಕ್ಕಿ ಜಿಂಕೆಗಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಆನಗೋಡು ಗ್ರಾಮದ ಬಳಿ ಇರುವ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಡೆದಿದೆ.

ಕಳೆದ ಮೂರೇ ದಿನದಲ್ಲಿ ನಾಲ್ಕು ಚುಕ್ಕಿ ಜಿಂಕೆಗಳು ಸಾವನ್ನಪ್ಪಿದ್ದು, ಮೃಗಾಯಲದಲ್ಲಿ ಹೆಮರಾಜಿಕ್ ಸೆಫ್ಟಿಸೆಮಿಯಾ ಎಂಬ ಸಾಂಕ್ರಾಮಿಕ ರೋಗ ಹರಡಿರಬಹುದು ಎಂದು ವೈದ್ಯರು ಶಂಕಿಸಿದ್ದಾರೆ.

ಮೃಗಾಲಯದಲ್ಲಿ ಸದ್ಯ 170 ಚುಕ್ಕೆ ಜಿಂಕೆಗಳಿದ್ದು, ಅವುಗಳನ್ನು ಉಳಿಸಿಕೊಳ್ಳಲು ವೈದ್ಯರು ರೋಗನಿರೋಧಕ ಚಿಕಿತ್ಸೆ ಆರಂಭಿಸಿದ್ದಾರೆ. ಇನ್ನೂ ಚಿಕಿತ್ಸೆ ನಡೆಯುತ್ತಿರುವ ಹಿನ್ನೆಲೆ ಅರಣ್ಯ ಇಲಾಖೆ ಅಧಿಕಾರಿಗಳು ತಾತ್ಕಾಲಿಕವಾಗಿ ಸಾರ್ವಜನಿಕರ ವೀಕ್ಷಣೆಗೆ ನಿರ್ಬಂಧ ಹೇರಿದ್ದಾರೆ.

RELATED ARTICLES
- Advertisment -
Google search engine

Most Popular