ಶ್ರೀನಗರ: ಶ್ರೀನಗರದಲ್ಲಿ ನಾಲ್ವರು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರನ್ನು ಭದ್ರತಾ ಪಡೆ ಬಂಧಿಸಿದೆ.
ನಿರ್ದಿಷ್ಟ ಮಾಹಿತಿಯ ಮೇರೆಗೆ ನಿಷೇಧಿತ ಉಗ್ರ ಸಂಘಟನೆಯೊಂದಿಗೆ ಸಂಪರ್ಕದಲ್ಲಿರುವ ನಾಲ್ವರು ಬರುತ್ತಿದ್ದಾರೆ ಎಂಬ ಮಾಹಿತಿ ಇತ್ತು. ಇದರಿಂದ ನಗರದ ಹೊರವಲಯದಲ್ಲಿರುವ ನೌಗಾಮ್‌ನ ಕೆನಿಹಮಾ ಪ್ರದೇಶದಲ್ಲಿ ಚೆಕ್‌ಪೋಸ್ಟ್ ಸ್ಥಾಪಿಸಲಾಗಿತ್ತು. ತಪಾಸಣೆಯ ಸಮಯದಲ್ಲಿ, ಭದ್ರತಾ ಪಡೆಗಳು ವಾಹನವನ್ನು ತಡೆದು ನಾಲ್ವರನ್ನು ಬಂಧಿಸಲಾಯಿತು ಎಂದು ಸೇನೆಯ ವಕ್ತಾರರು ತಿಳಿಸಿದ್ದಾರೆ.
ಬಂಧಿತರನ್ನು ಮೊಹಮ್ಮದ್ ಯಾಸೀನ್ ಭಟ್, ಶೆರಾಜ್ ಅಹ್ಮದ್ ರಾಥರ್, ಗುಲಾಮ್ ಹಸನ್ ಖಾಂಡೆ ಹಾಗೂ ಇಮ್ತಿಯಾಜ್ ಅಹ್ಮದ್ ಭಟ್ ಎಂದು ಗುರುತಿಸಿದ್ದಾರೆ. ಬಂಧಿತರು ಲಕ್‌ನಂಬಲ್ ಜಫ್ರಾನ್ ಕಾಲೋನಿ ಪಂಥಾ ಚೌಕ್ ಮತ್ತು ಫ್ರೆಸ್ಟಾಬಲ್ ಪಾಂಪೋರ್‌ನ ನಿವಾಸಿಗಳು ಎಂಬುದು ತಿಳಿದು ಬಂದಿದೆ.