ಮಂಗಳೂರಲ್ಲಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಬಾಂಗ್ಲಾದೇಶಿ ಪ್ರಜೆ ಎಂದು ಆರೋಪಿಸಿ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೂರು ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬುಧವಾರ ಬಂಧಿಸಿದ್ದಾರೆ.
ಬಂಧಿತನನ್ನು ಕೂಳೂರಿನ ಮೋಹನ್ (37) ಎಂದು ಗುರುತಿಸಲಾಗಿದೆ. ಈ ಮುಂಚೆ ಕೂಳೂರಿನ ರತೀಶ್ ದಾಸ್ (32), ಧನುಷ್ (24), ಸಾಗರ್ (24) ಎಂಬವರನ್ನು ಬಂಧಿಸಲಾಗಿತ್ತು. ಮೋಹನ್ನ ಬಂಧನದೊಂದಿಗೆ ಪ್ರಕರಣದ ನಾಲ್ಕು ಮಂದಿ ಆರೋಪಿಗಳನ್ನೂ ಪೊಲೀಸರು ಬಂಧಿಸಿದಂತಾಗಿದೆ.
ಕಳೆದ 15 ವರ್ಷಗಳಿಂದ ಮಂಗಳೂರು ಸೇರಿದಂತೆ ಮತ್ತಿತರ ಕಡೆ ಮೇಸ್ತ್ರಿ ಕೆಲಸ ಮಾಡುತ್ತಿದ್ದ ದಿಲ್ಜಾನ್ ಅನ್ಸಾರಿ ಜ.11ರಂದು ಸಂಜೆ ಕೆಲಸ ಮುಗಿಸಿ ಕೂಳೂರಿನಲ್ಲಿ ಬಸ್ಸಿನಿಂದ ಇಳಿದು ಮನೆಗೆ ಹೋಗುತ್ತಿದ್ದಾಗ ಆರೋಪಿಗಳು ಬಾಂಗ್ಲಾದೇಶಿ ಪ್ರಜೆ ಎಂದು ನಿಂದಿಸಿ ದೌರ್ಜನ್ಯ ಎಸಗಿದ್ದ ಬಗ್ಗೆ ಕಾವೂರು ಠಾಣೆಯಲ್ಲಿ ಕ್ರೈಂ no:3/26 ಕಲಂ 126,352,351(3),353,109,1118(1),r/w 3(5) ಪ್ರಕರಣ ದಾಖಲಾಗಿತ್ತು.
ಬಾಂಗ್ಲಾದೇಶಿ ಪ್ರಜೆ ಎಂದು ಆರೋಪಿಸಿ ಹಲ್ಲೆ ಕೇಸ್: ನಾಲ್ಕನೇಯ ಆರೋಪಿ ಅರೆಸ್ಟ್
RELATED ARTICLES



