Saturday, July 12, 2025
Google search engine

Homeಅಪರಾಧವಿದೇಶ ಉದ್ಯೋಗದ ಹೆಸರಿನಲ್ಲಿ ಕೋಟ್ಯಂತರ ವಂಚನೆ: ಮಂಗಳೂರಲ್ಲಿ ಆರೋಪಿಗಳಿಗೆ ಕೆ-ಕೋಕಾ ಅಡಿ ಪ್ರಕರಣ

ವಿದೇಶ ಉದ್ಯೋಗದ ಹೆಸರಿನಲ್ಲಿ ಕೋಟ್ಯಂತರ ವಂಚನೆ: ಮಂಗಳೂರಲ್ಲಿ ಆರೋಪಿಗಳಿಗೆ ಕೆ-ಕೋಕಾ ಅಡಿ ಪ್ರಕರಣ

ಮಂಗಳೂರು (ದಕ್ಷಿಣ ಕನ್ನಡ): ವಿದೇಶದಲ್ಲಿ ಉದ್ಯೋಗದ ವೀಸಾ ಕೊಡಿಸುವುದಾಗಿ ಆಸೆ ತೋರಿಸಿ ಮಂಗಳೂರಲ್ಲಿ 300 ಮಂದಿ ಉದ್ಯೋಗ ಆಕಾಂಕ್ಷಿಗಳಿಂದ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಗಳ ವಿರುದ್ಧ ಕೆ-ಕೋಕಾ ಅಂದ್ರೆ ಕರ್ನಾಟಕ ಕಂಟ್ರೋಲ್ ಆಫ್ ಆರ್ಗನೈಸ್ಡ್ ಆ್ಯಕ್ಟ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ವೀಡಿಯೋ ಮೂಲಕ ಹೇಳಿಕೆ ನೀಡಿದ್ದಾರೆ.

ಆರೋಪಿಗಳ ವಿರುದ್ಧ ಈಗಾಗಲೇ ನಗರದ ಬಂದರ್ ಮತ್ತು ನವಿ ಮುಂಬೈ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಎರಡು ಪ್ರಕರಣಗಳು ದಾಖಲಾಗಿರುವುದರಿಂದ ಆರೋಪಿಗಳ ವಿರುದ್ಧ ಕೆ-ಕೋಕಾ (ಕರ್ನಾಟಕ ಕಂಟ್ರೋಲ್ ಆಫ್ ಆರ್ಗನೈಸ್ಡ್ ಆ್ಯಕ್ಟ್) ಕಾಯ್ದೆಯಡಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಕೆ-ಕೋಕಾ ಕಾಯ್ದೆಯಡಿ ಪೊಲೀಸರಿಗೆ ವಿಶೇಷ ಅಧಿಕಾರವೂ ಸಿಗುವುದರಿಂದ ಆರೋಪಿಗಳಿಗೆ ಜಾಮೀನು ಸಿಗುವುದು ಕಷ್ಟ. ಎರಡು ಪ್ರಕರಣಗಳಲ್ಲಿ ಭಾಗಿಯಾದ ಪ್ರತಿಯೊಬ್ಬರ ವಿರುದ್ಧವೂ ಕೆ-ಕೋಕಾ ಕಾಯ್ದೆಯನ್ನು ಜಾರಿಗೊಳಿಸಲು ಅವಕಾಶವಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular