ಮೈಸೂರು: ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠದ ವತಿಯಿಂದ ಮೈಸೂರಿನ ಸಿದ್ಧಾರ್ಥನಗರದಲ್ಲಿರುವ ಕನಕ ಸಮುದಾಯ ಭವನದಲ್ಲಿ ದಿನಾಂಕ: ೧೫-೧೦-೨೦೨೩ರ ಭಾನುವಾರ ಬೆಳಿಗ್ಗೆ ೮ ಗಂಟೆಯಿಂದ ಮಧ್ಯಾಹ್ನ ೨ ಗಂಟೆವರೆಗೆ ಉಚಿತ ಕಣ್ಣಿನ ತಪಾಸಣಾ ಶಿಬಿರ ಹಾಗೂ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ಶ್ರೀ ಕಾಗಿನೆಲೆ ಮೈಸೂರು ಶಾಖಾ ಮಠದ ಶ್ರೀಗಳಾದ ಶ್ರೀ ಶಿವಾನಂದಪುರಿ ಮಹಾಸ್ವಾಮಿಜಿ ತಿಳಿಸಿದರು.
ಜಿಲ್ಲಾ ಅಂದತ್ವ ನಿಯಂತ್ರಣಾ ಸಂಸ್ಥೆ ಮೈಸೂರು, ಕಾವೇರಿ ಆಸ್ಪತ್ರೆ ಹುಣಸೂರು, ಸುಯೋಗ್ ಆಸ್ಪತ್ರೆ ಮೈಸೂರು, ಶ್ರೀ ಗಣೇಶ್ ಕುಮಾರಸ್ವಾಮಿ ಸೇವಾ ಬಳಗ ಹಾಗೂ ಶಂಕರ ಕಣ್ಣಿನ ಆಸ್ಪತ್ರೆ ಬೆಂಗಳೂರು ಸಹಯೋಗದಲ್ಲಿ ಬೃಹತ್ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ, ಬಿ.ಪಿ., ಸಕ್ಕರೆ ಖಾಯಿಲೆ ಹಾಗೂ ಹೃದಯರೋಗ ತಪಾಸಣಾ ಶಿಬಿರ ನಡೆಯಲಿದ್ದು ಈ ಆರೋಗ್ಯ ತಪಾಸಣಾ ಶಿಬಿರದ ಉದ್ಘಾಟನೆಯನ್ನು ಸುತ್ತೂರು ಮಹಾಸಂಸ್ಥಾನ ಮಠದ ಶ್ರೀಗಳಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ನೆರವೇರಿಸುವವರು ಎಂದ ಅವರು ಈ ಶಿಬಿರದ ಸದುಪಯೋಗವನ್ನು ಸಾರ್ವಜನಿಕರು ಬಳಸಿಕೊಳ್ಳಬೇಕೆಂದು ಶ್ರೀಗಳು ತಿಳಿಸಿದರು.