ಸಾಲಿಗ್ರಾಮ: ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರವನ್ನು ನಾಳೆ ಅ. 20 ರಂದು ತಾಲೂಕಿನ ಹರದನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ಪ್ರೆಸ್ ಕ್ಲಬ್‌ನ ಕೆ.ಆರ್.ನಗರ ತಾಲೂಕು ಘಟಕದ ಅಧ್ಯಕ್ಷ ಕೆ.ಟಿ.ಮೋಹನ್ ಕುಮಾರ್ ತಿಳಿಸಿದ್ದಾರೆ.
ಅವರು ಈ ಕುರಿತು ಪತ್ರಿಕಾ ಹೇಳಿಕೆಯನ್ನು ನೀಡಿ ಕರ್ನಾಟಕ ಪ್ರೆಸ್ ಕ್ಲಬ್ ಕೆ.ಆರ್.ನಗರ ತಾಲೂಕು ಘಟಕ, ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆ, ಜಿಲ್ಲಾ ಅಂದತ್ವ ನಿಯಂತ್ರಣ ವಿಭಾಗ, ಸಾಲಿಗ್ರಾಮದ ಸಮುದಾಯ ಆರೋಗ್ಯ ಕೇಂದ್ರ, ಹರದನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು, ನೇತ್ರಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರ ಸಂಯುಕ್ತ ಆಶ್ರಯದಲ್ಲಿ ಅ. 20ರ ಶುಕ್ರವಾರದಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ತಾಲೂಕಿನ ಹರದನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಏರ್ಪಡಿಸಲಾಗಿದೆ. ಸಾರ್ವಜನಿಕರು ಈ ಶಿಬಿರದ ಉಪಯೋಗವನ್ನು ಪಡೆದುಕೊಳ್ಳಬೇಕೆಂದು ಕರ್ನಾಟಕ ಪ್ರೆಸ್ ಕ್ಲಬ್ ತಾಲೂಕು ಅಧ್ಯಕ್ಷ ಕೆ.ಟಿ.ಮೋಹನ್ ಕುಮಾರ್ ಮನವಿ ಮಾಡಿದ್ದಾರೆ.