Saturday, April 19, 2025
Google search engine

Homeರಾಜ್ಯಸುದ್ದಿಜಾಲನಾಳೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ನಾಳೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಗುಂಡ್ಲುಪೇಟೆ: ಪಟ್ಟಣದ ಜೆಎಸ್‌ಎಸ್ ಅನುಭವ ಮಂಟಪದಲ್ಲಿ ನಾಳೆ ಡಿ.೯ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರದ ಸಮಾರೋಪ ಸಮಾರಂಭ ನಡೆಯಲಿದೆ. ಜೆಎಸ್‌ಎಸ್ ಮಹಾವಿದ್ಯಾಪೀಠ, ಜೆಎಸ್‌ಎಸ್ ಆಸ್ಪತ್ರೆ ಮೈಸೂರು ಹಾಗೂ ಜೆಎಸ್‌ಎಸ್ ಶಿಕ್ಷಣ ಸಂಸ್ಥೆಗಳು ಗುಂಡ್ಲುಪೇಟೆ ಇವರ ಸಹಯೋಗದೊಂದಿಗೆ ಡಿ.೦೯ರ ಶನಿವಾರ ಬೆಳಗ್ಗೆ ೧೧ ಗಂಟೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರದ ಸಮಾರೋಪವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ.

ಶಾಸಕ ಎಚ್.ಎಂ.ಗಣೇಶಪ್ರಸಾದ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಶಾಸಕ ಸಿ.ಎಸ್.ನಿರಂಜನಕುಮಾರ್ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕದ ಅಧ್ಯಕ್ಷ ಎಚ್.ಎಸ್.ನಂಜಪ್ಪ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ಕೊನೆಗೆ ಪ್ರಸಾದ ವಿತರಣೆಯಿದ್ದು, ಆರೋಗ್ಯ ತಪಾಸಣಾ ಶಿಬಿರಕ್ಕೆ ಬರುವ ರೋಗಿಗಳು ಹಾಗು ಸಾರ್ವಜನಿಕರು ಆಗಮಿಸಬೇಕು ಯಶಸ್ವಿಗೊಳಿಸಬೇಕೆಂದು ಜೆಎಸ್‌ಎಸ್ ಕಾಲೇಜು ಪ್ರಾಂಶುಪಾಲರಾದ ಮಹದೇವಮ್ಮ ಪ್ರಕಟಣೆಯಲ್ಲಿ ಕೋರಿದ್ದಾರೆ.

RELATED ARTICLES
- Advertisment -
Google search engine

Most Popular