ಪಿರಿಯಾಪಟ್ಟಣ: ತಾಲ್ಲೂಕಿನ ಮುತ್ತೂರು ಗ್ರಾಮದಲ್ಲಿ ಗುರು ಮೆಡಿಕಲ್ ಮತ್ತು ಶ್ರೀ ಕ್ಲಿನಿಕ್ 6ನೇ ಶಾಖೆ ಉದ್ಘಾಟನೆ ಅಂಗವಾಗಿ ಉಚಿತ ಬೃಹತ್ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಉದ್ಯಮಿ ರಘುಪತಿ ತಿಳಿಸಿದ್ದಾರೆ.
ಮೈಸೂರಿನ ಕ್ಲಿಯರ್ ಮೆಡಿ ರೇಡಿಯಂಟ್ ಆಸ್ಪತ್ರೆ ಸಹಕಾರದೊಂದಿಗೆ ಪಿರಿಯಾಪಟ್ಟಣದ ಗುರು ಮೆಡಿಕಲ್ಸ್ ಮತ್ತು ಶ್ರೀ ಕ್ಲಿನಿಕ್ ನೇತೃತ್ವದಲ್ಲಿ ಪಿರಿಯಾಪಟ್ಟಣ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ರೋಟರಿ ಐಕಾನ್ಸ್, ಕರುನಾಡ ಜನಜಾಗೃತಿ ವೇದಿಕೆ ಸಹಭಾಗಿತ್ವದಲ್ಲಿ ಶಿಬಿರ ನಡೆಯಲಿದ್ದು ಪಶು ಸಂಗೋಪನೆ ಹಾಗೂ ರೇಷ್ಮೆ ಸಚಿವರಾದ ಕೆ.ವೆಂಕಟೇಶ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕೆಪಿಸಿಸಿ ಸದಸ್ಯರು ಹಾಗೂ ಆಶ್ರಯ ಸಮಿತಿ ಅಧ್ಯಕ್ಷರಾದ ನಿತಿನ್ ವೆಂಕಟೇಶ್, ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಡಾ.ಬಿ.ಜೆ ವಿಜಯ್ ಕುಮಾರ್ ಭಾಗವಹಿಸಲಿದ್ದಾರೆ. ಶಿಬಿರದಲ್ಲಿ ವಿವಿಧ ತಜ್ಞ ವೈದ್ಯರು ಹಾಜರಿದ್ದು ತಪಾಸಣೆ ನಡೆಸಲಿದ್ದು ತಾಲೂಕಿನ ಜನತೆ ಶಿಬಿರ ಸದ್ಬಳಕೆ ಮಾಡಿಕೊಳ್ಳುವಂತೆ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬೆಕ್ಕರೆ ಸತೀಶ್ ಆರಾಧ್ಯ , ಪ್ರಧಾನ ಕಾರ್ಯದರ್ಶಿ ಪಿ.ಡಿ ಪ್ರಸನ್ನ ಹಾಗೂ ಸದಸ್ಯರು ಕೋರಿದ್ದಾರೆ.