ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮವನ್ನು ಆಗಸ್ಟ್ ೧೮ ರಂದು ಬೆಳಿಗ್ಗೆ ೯.೨೦ ಗಂಟೆಗೆ ಶ್ರೀ ಮಲೈ ಮಹದೇಶ್ವರಸ್ವಾಮಿ ದೇವಸ್ಥಾನದ ರಂಗಮAದಿರ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಮೈಸೂರು ಮಹಾಸಂಸ್ಥಾನ ಮಠದ ಸುತ್ತೂರು ವೀರಸಿಂಹಾಸನ ಪೀಠಾಧಿಪತಿಗಳಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸುವರು. ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಶಾಶ್ವತ ಸದಸ್ಯರು ಮತ್ತು ಶ್ರೀ ಸಾಲೂರು ಬೃಹನ್ಮಠದ ಪೀಠಾಧಿಪತಿಗಳಾದ ಶ್ರೀ ಡಾ. ಶಾಂತಮಲ್ಲಿಕಾರ್ಜುನ ಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸಮ್ಮುಖದಲ್ಲಿ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ನಡೆಯಲಿದೆ.
ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಕಾರ್ಯಕ್ರಮ ಉದ್ಘಾಟಿಸುವರು. ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು.
ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರಾದ ಕೆ. ವೆಂಕಟೇಶ್ ಅವರು ನೂತನ ವಧುವಿಗೆ ಮಾಂಗಲ್ಯ ವಿತರಿಸುವರು. ಸಾರಿಗೆ ಮತ್ತು ಮುಜರಾಯಿ ಸಚಿವರು ಹಾಗೂ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರಾದ ರಾಮಲಿಂಗಾರೆಡ್ಡಿ ಅವರು ನೂತನ ವಧು ವರರಿಗೆ ವಸ್ತ್ರ ವಿತರಣೆ ಮಾಡುವರು. ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರು ಕಾರ್ಯಕ್ರಮದ ವಿಶೇಷ ಆಹ್ವಾನಿತರಾಗಿ ಪಾಲ್ಗೋಳ್ಳುವರು.
ಶಾಸಕರಾದ ಎಂ.ಆರ್. ಮಂಜುನಾಥ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಸುನೀಲ್ ಬೋಸ್ ಅವರು ನೆನಪಿನ ಕಾಣಿಕೆ ವಿತರಿಸುವರು. ಎಂ.ಎಸ್.ಐ.ಎಲ್. ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎ.ಆರ್. ಕೃಷ್ಣಮೂರ್ತಿ, ಹೆಚ್.ಎಂ. ಗಣೇಶ್ ಪ್ರಸಾದ್ ಅವರು ಪ್ರಮಾಣ ಪತ್ರ ವಿತರಣೆ ಮಾಡುವರು.
ಶಾಸಕ ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು ಜಿ. ಮಾದೇಗೌಡ, ಕೆ.ವಿವೇಕಾನಂದ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ. ಪುಷ್ಪ ಅಮರನಾಥ್, ಕಾವೇರಿ ಜಲಾನಯನ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷರಾದ ಪಿ.ಮರಿಸ್ವಾಮಿ, ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತ ಅಧ್ಯಕ್ಷರಾದ ಎಂ. ನಂಜುAಡಸ್ವಾಮಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಹೆಚ್.ವಿ. ಚಂದ್ರು, ಮಹದೇಶ್ವರ ಬೆಟ್ಟದ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅರ್ಚನ, ನಾಮ ನಿರ್ದೇಶಿತ ಸದಸ್ಯರಾದ ಗಂಗನ ತಿಮ್ಮಯ್ಯ, ಭಾಗ್ಯಮ್ಮ, ಬಿ. ಮಹದೇವಪ್ಪ, ಮರಿಸ್ವಾಮಿ, ಆರ್.ಎಸ್. ಕುಮಾರ ವಿಜಯ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.