Monday, June 22, 2026
Google search engine

Homeರಾಜಕೀಯಇನ್ನು ಮುಂದೆ ‘ಕೃಷ್ಣಾ’ದಲ್ಲೇ ಜನಸ್ಪಂದನೆ: ಡಿಕೆ ಶಿವಕುಮಾರ್

ಇನ್ನು ಮುಂದೆ ‘ಕೃಷ್ಣಾ’ದಲ್ಲೇ ಜನಸ್ಪಂದನೆ: ಡಿಕೆ ಶಿವಕುಮಾರ್

ಬೆಂಗಳೂರು: ಸಾರ್ವಜನಿಕರು, ಶಾಸಕರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಇನ್ನು ಮುಂದೆ ಮುಖ್ಯಮಂತ್ರಿಗಳ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಮಾತ್ರ ಭೇಟಿ ಮಾಡುವುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಅನಿವಾರ್ಯ ಕಾರಣಗಳಿಂದ ಇನ್ನು ಮುಂದೆ ಸದಾಶಿವನಗರ ನಿವಾಸದಲ್ಲಿ ಯಾರನ್ನೂ ಭೇಟಿ ಮಾಡುವುದಿಲ್ಲ, ಯಾರೂ ಇಲ್ಲಿಗೆ ಬರುವ ತೊಂದರೆ ತೆಗೆದುಕೊಳ್ಳಬೇಡಿ ಹಾಗೂ ಅನ್ಯಥಾ ಭಾವಿಸಬೇಡಿ ಎಂದು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಇನ್ನು ಮುಂದೆ ‘ಕೃಷ್ಣಾ’ ಕಚೇರಿಯಲ್ಲಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular