ಮಂಡ್ಯ: ಮಂಡ್ಯ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ, ಜಿಲ್ಲಾ ತೋಟಗಾರಿಕಾ ಸಂಘ (ರಿ ) ಇವರ ಸಂಯುಕ್ತ ಆಶ್ರಯದಲ್ಲಿ ೨೦೨೪ ರ ಫಲಪುಷ್ಫ ಪ್ರದರ್ಶನ ಉದ್ಘಾಟನಾ ಸಮಾರಂಭ ಕಾರ್ಯಕ್ರಮವನ್ನು ಮಂಡ್ಯ ತೋಟಗಾರಿಕಾ ಇಲಾಖೆ ಕಚೇರಿಯಲ್ಲಿ ಜನವರಿ ೨೬ರಂದು ಬೆಳಿಗ್ಗೆ ೧೦:೩೦ ಗಂಟೆಗೆ ಏರ್ಪಡಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವರಾದ ಎನ್. ಚೆಲುವರಾಯ ಸ್ವಾಮಿಯವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ವಿಧಾನ ಸಭಾ ಕ್ಷೇತ್ರದ ಶಾಸಕರಾದ ಪಿ. ರವಿಕುಮಾರ್ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಫಲಪುಷ್ಫ ಪ್ರದರ್ಶನವು ಬೆಳಿಗ್ಗೆ ೧೦.೦೦ ಗಂಟೆಯಿಂದ ರಾತ್ರಿ ೮.೩೦ ಗಂಟೆಯವರೆಗೆ ಪ್ರದರ್ಶನ ವೀಕ್ಷಿಸಲು ಅವಕಾಶವಿರುತ್ತದೆ. ಸಂಜೆ ೬:೦೦ ಗಂಟೆಯಿಂದ ರಾತ್ರಿ ೮.೩೦ ಗಂಟೆಯವರೆಗೆ ಸಾಂಸ್ಕೃತಿಕ/ ಮನೋರಂಜನ ಕಾರ್ಯಕ್ರಮವು ನಡೆಯುತ್ತದೆ. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸಂಸದೆ ಸುಮಲತಾ ಅಂಬರೀಶ್, ಶಾಸಕ ಮರಿತಿಬ್ಬೇಗೌಡ, ಮಧು.ಜಿ. ಮಾದೇಗೌಡ, ದಿನೇಶ್ ಗೂಳಿಗೌಡ, ಪಿ.ಎಂ. ನರೇಂದ್ರಸ್ವಾಮಿ, ರಮೇಶ್ ಬಂಡಿ ಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ಎಚ್.ಟಿ. ಮಂಜು, ಕೆ.ಎಂ. ಉದಯ್ ಸೇರಿದಂತೆ ಇನ್ನಿತರು ಆಗಮಿಸಲಿದ್ದಾರೆ.