ನವದೆಹಲಿ: ಕೆ.ಕೆ.ಬಿರ್ಲಾ ಪ್ರತಿಷ್ಠಾನ ನೀಡುವ ಜಿ.ಡಿ.ಬಿರ್ಲಾ ವೈಜ್ಞಾನಿಕ ಸಂಶೋಧನೆ ಪ್ರಶಸ್ತಿಗೆ ಬೆಂಗಳೂರಿನ ಪ್ರಾಧ್ಯಾಪಕ ಸುಬಿ ಜಾಕೊಬ್ ಜಾರ್ಜ್ ಆಯ್ಕೆಯಾಗಿದ್ದಾರೆ.
೧೯೯೧ರಲ್ಲಿ ಸ್ಥಾಪನೆಯಾದ ಈ ಪ್ರಶಸ್ತಿಯನ್ನು ೫೦ ವರ್ಷದೊಳಗಿನ ವಿಜ್ಞಾನಿಗಳಿಗೆ ನೀಡಲಾಗುತ್ತದೆ. ಪ್ರಶಸ್ತಿ ಮೊತ್ತ ೭೫ ಲಕ್ಷ. ವಿವಿಧ ಕ್ಷೇತ್ರಗಳ ವಿಜ್ಞಾನಿಗಳನ್ನು ಒಳಗೊಂಡ ಆಯ್ಕೆ ಸಮಿತಿಯು ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಿದೆ.
ಜಾರ್ಜ್ ಅವರು ಬೆಂಗಳೂರಿನ ಜವಾಹರಲಾಲ್ ನೆಹರೂ ಉನ್ನತ ವೈಜ್ಞಾನಿಕ ಸಂಶೋಧನಾ ಕೇಂದ್ರದಲ್ಲಿ ಪ್ರಾಧ್ಯಾಪಕರಾಗಿದ್ದಾರೆ.
ಅವರು ಮಹಾತ್ಮಗಾಂಧಿ ವಿಶ್ವವಿದ್ಯಾಲಯದಲ್ಲಿ ರಸಾಯನ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಿ.ಎನ್.ಆರ್ ರಾವ್ ರಾಷ್ಟ್ರೀಯ ಪ್ರಶಸ್ತಿ, ಶಾಂತಿ ಸ್ವರೂಪ್ ಭಟ್ನಾಗರ್ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.