ಮಂಡ್ಯ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಅವರು ಮಂಗಳವಾರ ಸಂಜೆ ೮ ಗಂಟೆಯಲ್ಲಿ ಮಂಡ್ಯ ಟೌನ್ ನಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ ಪರಿಶೀಲಿಸಿ, ಶುಚಿತ್ವ ಕಾಪಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ವಿದ್ಯಾರ್ಥಿ ನಿಲಯಗಳಲ್ಲಿ ಮೇನು ಚಾರ್ಟ್ ಪ್ರಕಾರ ಉತ್ತಮ ಗುಣಮಟ್ಟದ ಆಹಾರ ಪದಾರ್ಥಗಳನ್ನು ನೀಡುತ್ತಿರುವ ಬಗ್ಗೆ ವಿದ್ಯಾರ್ಥಿಗಳಲ್ಲಿ ಮಾಹಿತಿ ಪಡೆದುಕೊಂಡರು. ನಂತರ ವಿದ್ಯಾರ್ಥಿಗಳೊಂದಿಗೆ ಊಟ ಮಾಡಿ, ಊಟದ ಗುಣಮಟ್ಟವನ್ನು ಪರಿಶೀಲಿಸಿದರು.
ವಿದ್ಯಾರ್ಥಿಗಳ ಬಯೋ ಮೆಟ್ರಿಕ್ ಹಾಜರಾತಿ ಪರಿಶೀಲಿಸಿ ವಿದ್ಯಾರ್ಥಿ ನಿಲಯದ ಗ್ರಂಥಾಲಯಗಳಲ್ಲಿರುವ ಪುಸ್ತಕಗಳನ್ನು ಪರಿಶೀಲಿನೆ ಮಾಡಿದರು.
ವಿದ್ಯಾರ್ಥಿನಿಲಯದ ದಾಸ್ತುನು ಕೊಠಡಿಗೆ ಭೇಟಿ ನೀಡಿ ಆಹಾರ ಪದಾರ್ಥಗಳ ಗುಣಮಟ್ಟ ಹಾಗೂ ಸೋಲಾರ್ ಮತ್ತು ಕಂಪ್ಯೂಟರ್, ಯು.ಪಿ.ಎಸ್.ನ ಗಳನ್ನು ವೀಕ್ಷಿಸಿ ಕೊರತೆ ಇರುವ ಸೋಲಾರ್ ಹಾಗೂ ಕಂಪ್ಯೂಟರ್‌ಗಳ ಪಟ್ಟಿಯನ್ನು ಕಳುಹಿಸಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ವಿದ್ಯಾರ್ಥಿನಿಲಯವನ್ನು ಸ್ವಚ್ಚವಾಗಿಟ್ಟು ಕೊಳ್ಳುವಂತೆ ಸಲಹೆ ನೀಡಿ, ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡಿ ವಿವಿಧ ಹುದ್ದೆಯನ್ನು ಪಡೆದಿರುವ ಹಳೆ ವಿದ್ಯಾರ್ಥಿಗಳ ಪಟ್ಟಿಯನ್ನು ವಿದ್ಯಾರ್ಥಿನಿಲಯದ ನಾಮಫಲಕದಲ್ಲಿ ಹಾಕಲು ಸೂಚಿಸಿದರು.
ಇದೇ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಡಾ.ಸಿದ್ದಲಿಂಗೇಶ್, ಹಿಂದುಗಳ ವರ್ಗಗಳ ಕಲ್ಯಾಣಾಧಿಕಾರಿ ಶ್ರೀನಿವಾಸ್, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಕಾವ್ಯಶ್ರೀ, ನಿಲಯಪಾಲಕರಾದ ವಿನೋದ ಕುಮಾರ ಸೇರಿದಂತೆ ಇನ್ನಿತರರು ಹಾಜರಿದ್ದರು.