ಗದಗ: ಶಕ್ತಿ ಯೋಜನೆ ಪರಿಣಾಮ ನೂಕುನುಗ್ಗಲಿನಲ್ಲಿ ಬಸ್ ನಿಂದ ಬಿದ್ದು ಮಹಿಳೆ ಗಾಯಗೊಂಡಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಬಸ್ ನಿಲ್ದಾಣದಲ್ಲಿ ನಡೆದಿದೆ.
ಲಕ್ಷ್ಮೇಶ್ವರ ದಿಂದ ಗದಗ ತೆರಳುತ್ತಿದ್ದ ಸರ್ಕಾರಿ ಬಸ್ ಫುಲ್ ರಶ್ ಇದ್ದ ಹಿನ್ನೆಲೆಯಲ್ಲಿ ಚಲಿಸುತ್ತಿದ್ದ ಬಸ್ ನಿಂದ ಇಳಿಯುವಾಗ ಆಯಾತಪ್ಪಿ ಮಹಿಳೆ ಕೆಳಗೆ ಬಿದ್ದಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ವಲ್ಪದರಲ್ಲೇ ಅನಾಹುತ ತಪ್ಪಿದೆ.
ಮಹಿಳೆಯ ಕಾಲಿಗೆ ಗಂಭೀರ ಗಾಯವಾಗಿದ್ದು, ಲಕ್ಷ್ಮೇಶ್ವರದ ತಾಲೂಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಕ್ಷ್ಮೇಶ್ವರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
