ಗದಗ: ಕನಿಷ್ಠ ವೇತನಕ್ಕೆ ಒತ್ತಾಯಿಸಿ ಗದಗ-ಬೆಟಗೇರಿ ನಗರಸಭೆಯ ಘಂಟಿ ಗಾಡಿಯ ಸಿಬ್ಬಂದಿಗಳು ಗದಗ ಜಿಲ್ಲಾಡಳಿತ ಭವನದ ಮುಂಭಾಗ ಪ್ರತಿಭಟನೆ ನಡೆಸಿದರು.
2005 ರಿಂದ ಪ್ರಸ್ತುತದವರೆಗೆ ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದು, ಸಿಬ್ಬಂದಿಗಳಿಗೆ ಸೇವಾ ಭದ್ರತೆ, ಕನಿಷ್ಠ ವೇತನ, ಇಎಸ್ ಐ,ಪಿಎಫ್, ಆರೋಗ್ಯ ಸೌಲಭ್ಯ ಇಲ್ಲದೇ ಪರದಾಡುವಂತಾಗಿದೆ.
ಕಳೆದ 17 ವರ್ಷಗಳಿಂದ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ನಗರಸಭೆ ಸಿಬ್ಬಂದಿ ಸಂಕಷ್ಟಕ್ಕೀಡಾಗಿದ್ದಾರೆ. ಆದ್ದರಿಂದ ಸರ್ಕಾರ ಘಂಟಿ ಗಾಡಿ ಮೂಲಕ ಕಸ ಸಂಗ್ರಹ ಮಾಡುವ ಸಿಬ್ಬಂದಿಗಳ ಬೇಡಿಕೆಗೆ ಸ್ಪಂದಿಸಬೇಕೆಂದು ಒತ್ತಾಯ ಮಾಡಿದರು.
