ಗದಗ: ಶಾಲಾ ಮಕ್ಕಳಿಗೆ ಅರೇ ಬರೇ ಬಿಸಿಯೂಟ ನೀಡುತ್ತಿರುವ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದಲ್ಲಿ ವರದಿಯಾಗಿದೆ.
ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 441 ಮಕ್ಕಳ ವ್ಯಾಸಂಗ ಮಾಡುತ್ತಿದ್ದು, ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಹೊಟ್ಟೆ ತುಂಬ ಊಟ ನೀಡುತ್ತಿಲ್ಲ. 441 ಮಕ್ಕಳ ಪೈಕಿ 40-50 ಮಕ್ಕಳಿಗೆ ಬಿಸಿಯೂಟ ಸಿಗುತ್ತಿಲ್ಲ.

3-4 ತಿಂಗಳಿಂದ ಮಕ್ಕಳಿಗೆ ಸರಿಯಾಗಿ ಊಟ ನೀಡುತ್ತಿಲ್ಲ. ಮಕ್ಕಳಿಗೆ ಬಿಸಿಯೂಟದ ಕೊರತೆಗೆ ಕಾರಣರಾದ ಶಾಲಾ ಮುಖ್ಯಶಿಕ್ಷಕಿ ಹಾಗೂ ಅಡುಗೆ ಸಹಾಯಕಿಯ ಮೇಲೆ ಸಂಬಂಧಿಸಿದ ಶಿಕ್ಷಣ ಇಲಾಖೆಯ ಅಧಿಕಾರಿಗಳ ಕ್ರಮ ಕೈಗೊಳ್ಳಬೇಕೆಂದು ಪೋಷಕರು ಆಗ್ರಹಿಸಿದ್ದಾರೆ.
ಸಮರ್ಪಕವಾಗಿ ಶಾಲಾ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವಂತೆಯೂ ಒತ್ತಾಯಿಸಿ ಪೋಷಕರು ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.