ಗದಗ: ಹರಿಯಾಣದ ನುಹ್ ನಲ್ಲಿ ಬೃಜ್ ಮಂಡಲ ಜಲಾಭಿಷೇಕ ಯಾತ್ರೆ ವೇಳೆ ನಡೆದಿದ್ದ ಗಲಭೆ ಖಂಡಿಸಿ ವಿಶ್ವ ಹಿಂದು ಪರಿಷ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಗದಗ ನಗರದ ಹುಯಿಲಗೋಳ ನಾರಾಯಣರಾವ್ ವೃತ್ತದಲ್ಲಿ ಧರಣಿ ನಡೆಸಿದ ಪ್ರತಿಭಟನಾಕಾರರು, ಗಲಭೆ ನಡೆಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು.
ಪ್ರತಿಭಟನೆ ವೇಳೆ ಖಾಲಿ ಬಾಕ್ಸ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.