Sunday, April 20, 2025
Google search engine

Homeರಾಜ್ಯಸುದ್ದಿಜಾಲಸೆ.14, 15ರಂದು ಗಗನಚುಕ್ಕಿ ಜಲಪಾತೋತ್ಸವ

ಸೆ.14, 15ರಂದು ಗಗನಚುಕ್ಕಿ ಜಲಪಾತೋತ್ಸವ

ಮಂಡ್ಯ: ಮಂಡ್ಯ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯವರ ಸಂಯುಕ್ತಾಶ್ರಯದಲ್ಲಿ ಗಗನಚುಕ್ಕಿ ಜಲಪಾತೋತ್ಸವ ೨೦೨೪ ಕಾರ್ಯಕ್ರಮವನ್ನು ಸೆ.೧೪, ೧೫ ರಂದು ಬೆಳಿಗ್ಗೆ ೧೧ ರಿಂದ ರಾತ್ರಿ ೧೦.೩೦ ಗಂಟೆಯವರೆಗೆ ಮಳವಳ್ಳಿ ತಾಲ್ಲೂಕಿನ ಗಗನಚುಕ್ಕಿ ಜಲಪಾತದಲ್ಲಿ ಹಮ್ಮಿಕೊಳ್ಳಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹಾಗೂ ಮಂಡ್ಯ ಸಂಸದ ಹೆಚ್ ಡಿ ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಮತ್ತು ಜಲಸಂಪನ್ಮೂಲ ಬೆಂಗಳೂರು ಅಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವ ಡಿ ಕೆ ಶಿವಕುಮಾರ್ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದಾರೆ.

ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ, ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ನ್ಯಾಯ ಮತ್ತು ಮಾನವ ಹಕ್ಕುಗಳು ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಹೆಚ್ ಕೆ ಪಾಟೀಲ್, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಸಂಗಪ್ಪ ತಂಗಡಗಿ ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ಎ ಬಿ ರಮೇಶ್ ಬಂಡಿಸಿದ್ದೇಗೌಡ ಅವರುಗಳು ಕಾರ್ಯಕ್ರಮದ ಗೌರವ ಉಪಸ್ಥಿತಿ ವಹಿಸುವರು. ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಪಿ ಎಂ ನರೇಂದ್ರಸ್ವಾಮಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕರುಗಳಾದ ಮಧು ಜಿ ಮಾದೇಗೌಡ, ದಿನೇಶ್ ಗೂಳಿಗೌಡ, ವಿವೇಕಾನಂದ, ವಿಧಾನಸಭಾ ಶಾಸಸಕರುಗಳಾದ ಪಿ ರವಿಕುಮಾರ್, ದರ್ಶನ್ ಪುಟ್ಟಣ್ಣಯ್ಯ, ಹೆಚ್ ಟಿ ಮಂಜು, ಕೆ ಎಂ ಉದಯ, ಮಂಡ್ಯ ಮೈಶುಗರ್ ಕಂಪನಿ ಲಿಮಿಟೆಡ್ ನ ಅಧ್ಯಕ್ಷ ಸಿ ಡಿ ಗಂಗಾಧರ್, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯೀಮ್ ಖಾನ್, ಮಳವಳ್ಳಿ ತಾಲ್ಲೂಕಿನನ ಹೊಸಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ಮಹದದೇವಮ್ಮ ಅವರುಗಳು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಸಲ್ಮಾ ಕೆ ಫಾಹಿಮ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ ಎಂ ಎನ್ ಅಜಯ್ ನಾಗಭೂಷಣ್, ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ ಅನ್ಬುಕುಮಾರ್, ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ಡಾ ರಾಜೇಂದ್ರ ಕೆ ವಿ ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಡಾ ಕೆ ಧರಣೀದೇವಿ ಮಾಲಗತ್ತಿ ಅವರುಗಳು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ.

RELATED ARTICLES
- Advertisment -
Google search engine

Most Popular