ಯಳಂದೂರು: ತಾಲೂಕಿನ ಅಂಬಳೆ ಗ್ರಾಮ ಪಂಚಾಯಿತಿಗೆ ಈ ಬಾರಿಯ ಗಾಂಧಿ ಗ್ರಾಮ ಪುರಸ್ಕಾರ ಲಭಿಸಿದ್ದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಗಾಂಧಿ ಜಯಂತಿಯ ನಿಮಿತ್ತ ಸೋಮವಾರ ನಡೆದ ರಾಜ್ಯ ಮಟ್ಟದ ಸ್ವಚ್ಚ ಸರ್ವೇಕ್ಷಣ ಅಭಿಯಾನ ಕಾರ್ಯಕ್ರಮದಲ್ಲಿ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ವಿತರಿಸಿದರು.
ಈ ಪ್ರಶಸ್ತಿ ಸ್ವೀಕರಿಸಿದ ಪಿಡಿಒ ಮಮತಾ ಮಾತನಾಡಿ, ನಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿ ದೀಪ, ಸ್ವಚ್ಚತೆ, ಇಂಗುಗುಂಡಿ ನಿರ್ಮಾಣ, ಅಂಗನವಾಡಿ ಕೇಂದ್ರಗಳ ನಿರ್ವಹಣೆ, ಮನರೇಗಾ ಯೋಜನೆಯಡಿಯಲ್ಲಿ ಕೆರೆಕಟ್ಟೆಗಳ ನಿರ್ಮಾಣ, ಇಂಗುಡುಂಡಿಗಳ ನಿರ್ಮಾಣ ಸೇರಿದಂತೆ ಅನೇಕ ಕಾಮಗಾರಿಗಳನ್ನು ನಿಗಧಿತ ಅವಧಿಯೊಳಗೆ ಮಾಡಿರುವುದು.
೨೦೨೨-೨೩ ನೇ ಸಾಲಿನಲ್ಲಿ ೧೬,೦೫೯ ಮಾನವ ದಿನಗಳನ್ನು ಸೃಜಿಸಲಾಗಿದೆ. ಅಲ್ಲದೆ ಗ್ರಾಮ ಪಂಚಾಯಿತಿಯ ನಿರ್ವಹಣೆಯಲ್ಲಿ ತೋರಿರುವ ಸಾಧನೆಗೆ ತಾಲೂಕಿನಲ್ಲಿ ನಮ್ಮ ಪಂಚಾಯಿತಿಗೆ ಈ ಪ್ರಶಸ್ತಿ ಲಭಿಸಿದೆ. ಇದಕ್ಕೆ ಸಹಕಾರ ನೀಡಿದ ಪಂಚಾಯಿತಿಯ ಅಧ್ಯಕ್ಷ, ಉಪಾಧ್ಯಕ್ಷೆ, ಸದಸ್ಯರು ಹಾಗೂ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ವ್ಯಾಪ್ತಿ ನಾಗರೀಕರಿಗೂ ಅಭಿನಂದನೆ ಸಲ್ಲಿಸುವುದಾಗಿ ಅವರು ತಿಳಿಸಿದರು.
ಗ್ರಾಪಂ ಅಧ್ಯಕ್ಷ ನಂಜುಂಡಸ್ವಾಮಿ ಮಾತನಾಡಿ, ನಮ್ಮ ಪಂಚಾಯಿತಿಗೆ ಈ ಬಾರಿಯ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಬಂದಿರುವುದು ಅತೀವ ಸಂತಸ ತಂದಿದೆ. ಈ ಪ್ರಶಸ್ತಿಯ ಜೊತೆ ನಮ್ಮ ಜವಾಬ್ದಾರಿಗಳು ಇನ್ನಷ್ಟು ಹೆಚ್ಚಿದೆ. ಇದನ್ನು ತಾಲೂಕಿನಲ್ಲೇ ಅತ್ಯುತ್ತಮ ಪಂಚಾಯಿತಿಯಾಗಿ ರೂಪಿಸಲಾಗುವುದು, ಗ್ರಾಮಗಳ ಸ್ವಚ್ಚತೆ, ಕುಡಿಯುವ ನೀರು, ರಸ್ತೆ, ಚರಂಡಿ ನಿರ್ವಹಣೆ ಸೇರಿದಂತೆ ಮೂಲ ಸಮಸ್ಯೆಗಳ ನಿವಾರಣೆ ಮಾಡಲು ಹೆಚ್ಚು ಗಮನ ಹರಿಸಲಾಗುವುದು. ಜೊತೆಗೆ ನರೇಗಾ ಯೋಜನೆಯ ಸದ್ಬಳಕೆ ಮಾಡಿಕೊಳ್ಳಲು ಹೆಚ್ಚಿನ ಗಮನ ನೀಡಲಾಗುವುದು ಎಂದರು. ಗ್ರಾಪಂ ಉಪಾಧ್ಯಕ್ಷೆ ಮಹದೇವಮ್ಮ, ಮಹದೇವಶೆಟ್ಟಿ ಸೇರಿದಂತೆ ಇತರರು ಇದ್ದರು,