Friday, April 11, 2025
Google search engine

Homeರಾಜ್ಯಗಾಂಧಿ ವಿಚಾರಧಾರೆಗಳು , ಮೌಲ್ಯಗಳು ಜಗತ್ತಿನಲ್ಲಿ ಇಂದಿಗೂ ಪ್ರಸ್ತುತ: ಮುಖ್ಯಮಂತ್ರಿ ಸಿದ್ದರಾಮಯ್ಯ

ಗಾಂಧಿ ವಿಚಾರಧಾರೆಗಳು , ಮೌಲ್ಯಗಳು ಜಗತ್ತಿನಲ್ಲಿ ಇಂದಿಗೂ ಪ್ರಸ್ತುತ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಮತಾಂಧ ನಾಥೂರಾಮ್ ಗೋಡ್ಸೆ ಮಹಾತ್ಮಾ ಗಾಂಧಿಯವರನ್ನು ಗುಂಡಿಟ್ಟು ಕೊಂದು, ಅವರು ಇಹಲೋಕ ತ್ಯಜಿಸಿರಬಹುದು. ಆದರೆ ಮಹಾತ್ಮಾ ಗಾಂಧೀಜಿಯವರ ಮೌಲ್ಯಗಳನ್ನು ಕೊಲ್ಲಲು ಗೋಡ್ಸೆಯಾಗಲಿ ಅಥವಾ ಇನ್ಯಾರಿಂದಾಗಲಿ ಕೊಲ್ಲಲು ಸಾಧ್ಯವಿಲ್ಲ. ಇಂದಿಗೂ ಅವರ ವಿಚಾರಧಾರೆಗಳು , ಮೌಲ್ಯಗಳು ಭಾರತದಲ್ಲಿ ಮಾತ್ರವಲ್ಲ ಜಗತ್ತಿನಲ್ಲಿಯೇ ಪ್ರಸ್ತುತವಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಹುತಾತ್ಮರ ದಿನಾಚರಣೆ ಅಂಗವಾಗಿ ವಿಧಾನಸೌಧದ ಮಹಾತ್ಮಾ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಜನವರಿ 30, 1948 ರಂದು ಮಹಾತ್ಮಾ ಗಾಂಧೀಜಿಯವರನ್ನು ಹತ್ಯೆ ಮಾಡಿದ ದಿನ. ಗಾಂಧೀಜಿಯವರು ನನ್ನ ಜೀವನವೇ ನನ್ನ ಸಂದೇಶ ಎಂದು ಹೇಳಿದ್ದರು. ಅವರ ಹೋರಾಟದ ಬದುಕು, ಅಹಿಂಸೆ, ಸತ್ಯಾಗ್ರಹ, ಇವು ನಮಗೆ ಪ್ರೇರಣೆ. ಜಗತ್ತಿನಲ್ಲಿ ಸತ್ಯ, ಅಹಿಂಸೆ, ಸತ್ಯಾಗ್ರಹದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ದೇಶದಲ್ಲಿ ಬಹಳ ದೀರ್ಘ ಕಾಲ ನಡೆದ ಹೋರಾಟದ ನಾಯಕತ್ವವನ್ನು ಗಾಂಧೀಜಿ ವಹಿಸಿದ್ದರು. 1915 ರಲ್ಲಿ ದಕ್ಷಿಣ ಆಫ್ರಿಕಾ ದಿಂದ ಭಾರತಕ್ಕೆ ಬಂದು ಮೊದಲು ದೇಶ, ದೇಶದ ಜನ, ಸಮಾಜ, ಬದುಕನ್ನು ಅರ್ಥಆಡಿಕೊಳ್ಳುವ ಪ್ರಯತ್ನ ಮಾಡಿ, ನಂತರ ಹೋರಾಟವನ್ನು ಪ್ರಾರಂಭಿಸಿದರು. ಸತ್ಯ ಅಹಿಂಸೆಗಳಿಂದ ಕೂಡಿದ್ದ ಹೋರಾಟದಲ್ಲಿ ಸಾವಿರಾರು ಜನ ಪಾಲ್ಗೊಂಡರು. ಅವರ ಹೋರಾಟದ ಫಲವಾಗಿ ನಮಗೆ ಸ್ವಾತಂತ್ರ್ಯ ದೊರೆತು, ಬ್ರಿಟಿಷರ ದಾಸ್ಯದಿಂದ ಬಿಡುಗಡೆ ದೊರೆಯಿತು ಎಂದು ವಿವರಿಸಿದರು.

ಮಹಾತ್ಮಾ ಗಾಂಧಿ ಅವರು ಒಮ್ಮೆ ಮಾತ್ರ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ಅವರ ಅಧ್ಯಕ್ಷತೆಯಲ್ಲಿ ಡಿಸೆಂಬರ್ 25,26,27 ರಂದು 1924 ನಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನ ನಡೆಯಿತು. ಅದರ ಸವಿನೆನಪಿಗಾಗಿ ಬೆಳಗಾವಿಯಲ್ಲಿ ಶತಮಾನೋತ್ಸವವನ್ನು ಆಚರಿಸಲಾಯಿತು. 26 ಮತ್ತು 27 ರಂದು ಕಾರ್ಯಕ್ರಮ ಜರುಗಿತು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

26 ರಂದು ನಡೆದ ರಾಷ್ಟ್ರೀಯ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಕಾರ್ಯಕಾರಿ ಸಮಿತಿ ಸದಸ್ಯರು, ಮುಖಂಡರು ಭಾಗವಹಿಸಿದ್ದರು. ಮೊದಲ ದಿನ ಮಹಾತ್ಮಾ ಗಾಂಧಿ ಅವರನ್ನು ನೆನಪು ಮಾಡಿಕೊಳ್ಳಲಾಯಿತು. ಭಾರತದ ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ಅವರ ನಿಧನದಿಂದಾಗಿ ಕಾರ್ಯಕ್ರಮ ಮುಂದೂಡಲ್ಪಟ್ಟಿತು. 27 ರಂದು ಗಾಂಧಿ ಭಾರತ ಹೆಸರಿನಲ್ಲಿ ನಡೆದು, ಘೋಷವಾಕ್ಯ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಎಂದಾಗಿತ್ತು. ಅಂದೆ ಮಹಾತ್ಮಾ ಗಾಂಧಿ ಅವರ ಕಂಚಿನ ಪ್ರತಿಮೆಯನ್ನು ಸುವರ್ಣ ಸೌಧದಲ್ಲಿ ಅನಾವರಣ ಮಾಡಲಾಯಿತು. ವಿಧಾನ ಸಭಾ ಅಧ್ಯಕ್ಷರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಲ್ಲಾ ಮಂತ್ರಿ ಮಂಡಲದ ಸದಸ್ಯರು, ಭಾಗವಹಿಸಿದ್ದರು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

RELATED ARTICLES
- Advertisment -
Google search engine

Most Popular