ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯಾದ್ಯಂತ ಶ್ರೀ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ, ಮೆರವಣಿಗೆ, ವಿಸರ್ಜನಾ ಕಾರ್ಯಕ್ರಮಗಳು ಶಾಂತಿಯುತವಾಗಿ ನಡೆಯಲು ಹಾಗೂ ಯಾವುದೇ ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗುವಂತಹ ಘಟನೆಗಳನ್ನು ತಡೆಯಲು, ಸಾರ್ವಜನಿಕರು, ವಯಸ್ಕರ, ಮಕ್ಕಳ ಆರೋಗ್ಯದ / ನೆಮ್ಮದಿಗೆ ಭಂಗ ಉಂಟು ಮಾಡುವ ಸಾಧ್ಯತೆ ಹೆಚ್ಚಾಗಿ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಕಾಯ್ದೆ-1963 ಕಲಂ 35, 36 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಆ. 27 ರಿಂದ ಶ್ರೀ ಗಣೇಶೋತ್ಸವ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ಬೆಂಗಳೂರು ದಕ್ಷಿಣ ಜಿಲ್ಲೆಯಾದ್ಯಂತ ಶ್ರೀ ಗಣೇಶ ಚತುರ್ಥಿ ಹಬ್ಬವನ್ನು ಆಚರಣೆ ಮಾಡುವ ಸಮಯದಲ್ಲಿ ಡಿ.ಜೆ ಸಿಸ್ಟಂ ಬಳಕೆ ನಿಷೇಧಗೊಳಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಯಶವಂತ್ ವಿ. ಗುರುಕರ್ ಅವರು ಆದೇಶಿಸಿದ್ದಾರೆ.