Friday, April 18, 2025
Google search engine

Homeಅಪರಾಧತುಮಕೂರು ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್: ಮೂವರು ಆರೋಪಿಗಳ ಬಂಧನ

ತುಮಕೂರು ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್: ಮೂವರು ಆರೋಪಿಗಳ ಬಂಧನ

ತುಮಕೂರು: ಸಿದ್ಧಗಂಗಾ ಮಠದ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ವಯಸ್ಸಿನ ಪಿಯು ವಿದ್ಯಾರ್ಥಿನಿಯನ್ನು ಬಲವಂತವಾಗಿ ಕರೆದೊಯ್ದು ಸಾಮೂಹಿಕ ಅತ್ಯಾಚಾರಗೈದಿರುವ ಘಟನೆ ತುಮಕೂರಿನ ಬಂಡೆಪಾಳ್ಯದ ನಡೆದಿರುವುದು ವರದಿಯಾಗಿದೆ. ಈ ಬಗ್ಗೆ ತುಮಕೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮಾ.೪ರಂದು ಸಿದ್ದಗಂಗಾ ಮಠದ ಜಾತ್ರೆಗೆ ತೆರಳಿದ್ದ ಬಾಲಕಿ ಬೆಟ್ಟದ ಅರ್ಧದಾರಿಯಲ್ಲಿ ಮರದ ಕೆಳಗೆ ಕುಳಿತು ತನ್ನ ಸ್ನೇಹಿತನ ಜೊತೆ ಮಾತನಾಡುತ್ತಿದ್ದಳು. ಈ ವೇಳೆ ಆರೋಪಿಗಳಾದ ಪ್ರತಾಪ್ ಹಾಗೂ ಇನ್ನೋರ್ವ ಅದನ್ನು ವೀಡಿಯೊ ಮಾಡಿದ್ದು, ಅದನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಸಿದ್ದಾರೆ. ಬಳಿಕ ಬಾಲಕಿಯನ್ನು ಬೈಕಿನಲ್ಲಿ ಬಲವಂತವಾಗಿ ಬಂಡೆಪಾಳ್ಯದ ಮನೆಯೊಂದಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರಗೈದಿರುವುದಾಗಿ ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

RELATED ARTICLES
- Advertisment -
Google search engine

Most Popular