Saturday, April 19, 2025
Google search engine

Homeರಾಜ್ಯಗಂಗಾ ಕಲ್ಯಾಣ: ಬಾಕಿ ಇರುವ ಅರ್ಜಿಗಳನ್ನು ಪೂರ್ಣಗೊಳಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಗಂಗಾ ಕಲ್ಯಾಣ: ಬಾಕಿ ಇರುವ ಅರ್ಜಿಗಳನ್ನು ಪೂರ್ಣಗೊಳಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ವಿದ್ಯುದೀಕರಣದ ೧೯೪೮ ಅರ್ಜಿಗಳು ಬಾಕಿ ಉಳಿದಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಎಂದು ಸ್ಪಷ್ಟ ಸೂಚನೆ ನೀಡಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಎಸ್ಕಾಂಗಳು ವಿದ್ಯುಚ್ಛಕ್ತಿ ಸಂಪರ್ಕ ಒದಗಿಸುವುದಕ್ಕೆ ಅನಗತ್ಯ ವಿಳಂಬ ಮಾಡಕೂಡದು. ಶುಲ್ಕ ಪಾವತಿಸಿಲ್ಲ ಎಂದು ಬಾಕಿ ಉಳಿಸಿಕೊಳ್ಳಬಾರದು. ಇದಕ್ಕೆ ಟ್ರಾನ್ಸ್‌ಫಾರ್ಮರ್‌ಗಳು ಇಲ್ಲ, ಕಂಬಗಳಿಲ್ಲ ಎಂಬ ನೆಪಗಳನ್ನು ಹೇಳಬಾರದು ಎಂದು ಇಂಧನ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜೆಸ್ಕಾಂ ಮತ್ತು ಹೆಸ್ಕಾಂಗಳಲ್ಲಿ ಬಾಕಿ ಇರುವ ಅರ್ಜಿಗಳ ಸಂಖ್ಯೆ ಹೆಚ್ಚಿರುವುದನ್ನು ಪರಿಶೀಲಿಸಿದ ಮುಖ್ಯಮಂತ್ರಿಗಳು ಅಭಿಯಾನ ಕೈಗೆತ್ತಿಕೊಂಡು ವಿದ್ಯುದೀಕರಣ ಕೈಗೊಳ್ಳಲು ಸೂಚಿಸಿದರು. ಗಂಗಾ ಕಲ್ಯಾಣ ಯೋಜನೆಯಡಿ ಬೋರ್ ವೆಲ್ ಕೊರೆಯುವುದು ಹಾಗೂ ವಿದ್ಯುದೀಕರಣದಲ್ಲಿ ಅನಗತ್ಯವಾಗಿ ವಿಳಂಬ ಮಾಡಬಾರದು. ಈ ವಿಳಂಬ ನೀತಿ ಅಪರಾಧ ಎಂದು ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದರು.

ವಿದ್ಯುತ್ ಉಪಕೇಂದ್ರ ಆರಂಭಿಸಲು ಮತ್ತು ಟ್ರಾನ್ಸ್ ಫಾರ್ಮರ್ ಲೈನ್‌ಗೆ ಭೂಮಿ ಒದಗಿಸುವಂತೆ ಎಷ್ಟು ಅರ್ಜಿಗಳು ಬಂದಿವೆ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ಇದಕ್ಕೆ ಅಧಿಕಾರಿಯೊಬ್ಬರ ಉತ್ತರದಿಂದ ಅಸಮಾಧಾನಗೊಂಡ ಸಿಎಂ ಆ ಅರ್ಜಿಗಳನ್ನು ಜೇಬಿನಲ್ಲಿ ಇಟ್ಕೊಂಡು ಏನ್ ಮಾಡ್ತಾ ಇದೀರಾ. ಮೊದಲು ಆ ಎಲ್ಲ ಅರ್ಜಿಗಳ ಬೇಡಿಕೆ ಪೂರ್ಣಗೊಳಿಸಿ ಎಂದು ಸೂಚಿಸಿದರು.

RELATED ARTICLES
- Advertisment -
Google search engine

Most Popular