Thursday, February 12, 2026
Google search engine

Homeರಾಜ್ಯಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 3.39 ಕೋಟಿ ರೂ. ಮೌಲ್ಯದ ಗಾಂಜಾ ವಶ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 3.39 ಕೋಟಿ ರೂ. ಮೌಲ್ಯದ ಗಾಂಜಾ ವಶ

ಬೆಂಗಳೂರು : ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 3.39 ಕೋಟಿ ರೂ. ಮೌಲ್ಯದ ಹೈಡ್ರೋಫೋನಿಕ್‌ ಗಾಂಜಾವನ್ನು ವಶಕ್ಕೆ ಪಡೆದಿದ್ದು, ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕನ ಲಗೇಜ್ ಪರಿಶೀಲನೆ ವೇಳೆ ಬ್ಯಾಗ್‌ನಲ್ಲಿ 9.7 ಕೆಜಿ ಗಾಂಜಾ ಪತ್ತೆಯಾಗಿದೆ ಎನ್ನಲಾಗಿದೆ.

ಇನ್ನೂ ಗಾಂಜಾ ಸಮೇತ ಪ್ರಯಾಣಿಕನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದ್ದು ಈ ಸಂಬಂಧ ಎನ್‌ಡಿಪಿಎಸ್ ಕಾಯ್ದೆಯಡಿ ಕಸ್ಟಮ್ಸ್ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.

ಫೆ.7 ರಂದು ಸಹ ಕಸ್ಟಮ್ಸ್ ಅಧಿಕಾರಿಗಳು ಎರಡು ಪ್ರತ್ಯೇಕ ಪ್ರಕರಣದಲ್ಲಿ ಸುಮಾರು 3 ಕೋಟಿ ರೂ. ಮೌಲ್ಯದ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.

RELATED ARTICLES
- Advertisment -
Google search engine

Most Popular