ಬೆಂಗಳೂರು: ನಗರದ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ, ಮನೆ ಸಂಪೂರ್ಣ ಛಿದ್ರವಾಗಿ ಕುಸಿದು ಬಿದ್ದಿದ್ದರೇ, ಈ ಘಟನೆಯಲ್ಲಿ ಮನೆಯಲ್ಲಿದ್ದಂತ ನಾಲ್ವರು ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.
ಬೆಂಗಳೂರಿನ ಬೈಯ್ಯಪ್ಪನಹಳ್ಳಿಯ ಸಂಜಯ್ ಗಾಂಧಿ ನಗರದಲ್ಲಿ ಇಂದು ಸೋಮವಾರ ಮನೆಯಲ್ಲಿದ್ದಂತ ಅಡುಗೆ ಅನಿಲ ಸ್ಪೋಟಗೊಂಡು, ನಾಲ್ವರು ಗಾಯಗೊಂಡಿರುವಂತ ಘಟನೆ ನಡೆದಿದೆ.
ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಸ್ಪೋಟದಿಂದಾಗಿ ಮನೆಯ ಗೋಡೆಯೇ ಕುಸಿದು ಬಿದ್ದು, ಮನೆಯಲ್ಲಿದ್ದಂತ ವಸ್ತುಗಳು ನುಚ್ಚು ನೂರಾಗಿರುವುದಾಗಿ ತಿಳಿದು ಬಂದಿದೆ.
ಗ್ಯಾಸ್ ಸಿಲಿಂಡರ್ ಸ್ಪೋಟದಿಂದಾಗಿ ಗಾಯಗೊಂಡಿದ್ದಂತ ನಾಲ್ವರನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿ ದದಾರೆ. ಈ ಸಂಬಂಧ ಬೈಯ್ಯಪ್ಪನಹಳ್ಳಿ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಾಗಿದೆ.