ಮೈಸೂರು : ಸರ್ಕಾರಿ ಶಾಲೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಶಿಕ್ಷಕರು ಸೇರಿದಂತೆ ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಿ. ನರಸೀಪುರ ತಾಲೂಕಿನ ನಿಲಸೋಗೆ ಗ್ರಾಮದಲ್ಲಿ ನಡೆದಿದೆ.
ನಿಲಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಮಹದೇವಯ್ಯ, ಶಿಕ್ಷಕಿ ಮೀನಾಕ್ಷಿ, ವಿದ್ಯಾರ್ಥಿಗಳಾದ ಧನುಷ್, ಪೃಥ್ವಿ, ಗೌತಮ್‌ಗೆ ಗಂಭೀರ ಗಾಯವಾಗಿದೆ. ಗಾಯಾಳುಗಳಿಗೆ ನರಸೀಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಬಿಇಒ ಶೋಭಾ ಭೇಟಿ ನೀಡಿ ಪರಿಶೀಲಿಸಿದರು. ಈ ಘಟನೆ ಬಗ್ಗೆ ನರಸೀಪುರ ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ.