Saturday, April 19, 2025
Google search engine

Homeರಾಜ್ಯಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿಗೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದು ಪಡಿಸಿದ ಸುಪ್ರೀಂ

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿಗೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದು ಪಡಿಸಿದ ಸುಪ್ರೀಂ

ನವದೆಹಲಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಯೊಬ್ಬರಿಗೆ ಜಾಮೀನು ನೀಡಿ ಕರ್ನಾಟಕ ಹೈಕೋರ್ಟ್ ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ, ಆರೋಪಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಜಾಮೀನು ರದ್ದುಗೊಳಿಸುವಂತೆ ಹೈ ಕೋರ್ಟ್‌ಗೆ ಸೂಚಿಸಿದೆ.

ಹೈಕೋರ್ಟ್ ಆದೇಶ ಪ್ರಶ್ನಿಸಿ, ಗೌರಿ ತಂಗಿ ಕವಿತಾ ಲಂಕೇಶ್ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸತೀಶ್ಚಂದ್ರ ಶರ್ಮಾ ಅವರಿದ್ದ ನ್ಯಾಯಪೀಠ, ಆರೋಪಿ ಮೋಹನ್ ನಾಯಕ್ ಅವರಿಗೆ ನೋಟಿಸ್ ಜಾರಿ ಮಾಡಿದೆ. ಕರ್ನಾಟಕ ಹೈಕೋರ್ಟ್, ಆರೋಪಿಗೆ ಕಳೆದ ಡಿ. ೭ರಂದು ಜಾಮೀನು ನೀಡಿ ಆದೇಶಿಸಿತ್ತು. ಕವಿತಾ ಲಂಕೇಶ್ ಅವರು ಪ್ರಕರಣದ ಆರೋಪಿ ಗೌರಿ ಹತ್ಯೆಯ ಕ್ರಿಮಿನಲ್ ಪಿತೂರಿಯ ಭಾಗವಾಗಿರುವ ಮೋಹನ್ ನಾಯಕ್ ಗೆ ನೀಡಲಾದಜಾಮೀನನ್ನು ರದ್ದುಗೊಳಿಸುವಂತೆ ನಿರ್ದೇಶನ ನೀಡುವಂತೆ ಕವಿತಾ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

೨೦೧೭ ರ ಸೆಪ್ಟೆಂಬರ್ ೦೫ ರಂದು ಬೆಂಗಳೂರಿನಲ್ಲಿ ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಪ್ರಕರಣದ ಆರೋಪಿ ಮೋಹನ್ ನಾಯಕ್ ಡಿಸೆಂಬರ್ ೭, ೨೦೨೩ ರಂದು ಕರ್ನಾಟಕ ಹೈಕೋರ್ಟ್‌ನಿಂದ ಜಾಮೀನು ಪಡೆದಿದ್ದರು. ಕರ್ನಾಟಕ ಹೈಕೋರ್ಟ್ ಕಳೆದ ವರ್ಷ ಡಿಸೆಂಬರ್‌ನಲ್ಲಿ ತನ್ನ ಆದೇಶದಲ್ಲಿ, ವಿಚಾರಣೆಯ ವಿಳಂಬವನ್ನು ಉಲ್ಲೇಖಿಸಿ ನಾಯಕ್‌ಗೆ ಜಾಮೀನು ಮಂಜೂರು ಮಾಡಿತ್ತು. ವಿಶೇಷ ತನಿಖಾ ತಂಡ(ಎಸ್‌ಐಟಿ) ಪ್ರಕರಣದ ತನಿಖೆ ನಡೆಸುತ್ತಿದೆ.ನಾಯಕ್ ಪ್ರಕರಣದಲ್ಲಿ ೧೧ನೇ ಆರೋಪಿಯಾಗಿದ್ದು, ಒಟ್ಟು ೧೭ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

RELATED ARTICLES
- Advertisment -
Google search engine

Most Popular