ಬಳ್ಳಾರಿ: ಧಾರವಾಡದ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕಿ ಗಾಯತ್ರಿ ಚೆನ್ನವೀರಯ್ಯ ಕುಲಕರ್ಣಿ ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯವು ಪಿಹೆಚ್‌ಡಿ ಪದವಿ ಪ್ರದಾನ ಮಾಡಿದೆ.
ಜೆಎಸ್‌ಎಸ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಜೆ.ಎ ಹಡಗಲಿ ಅವರ ಮಾರ್ಗದರ್ಶನದಲ್ಲಿ ಗಾಯತ್ರಿ ಅವರು ಕನ್ನಡ ಸಾಹಿತ್ಯ ಅದ್ಯಯನ ವಿಭಾಗದಲ್ಲಿ “ಕನ್ನಡ ಚಲನಚಿತ್ರ ಗೀತೆಗಳಲ್ಲಿ ಮಹಿಳಾ ಪ್ರತಿನಿಧೀಕರಣ” ಎಂಬ ವಿಷಯದ ಕುರಿತು ಮಂಡಿಸಿದ ಮಹಾಪ್ರಬಂಧಕ್ಕೆ ಪಿಹೆಚ್‌ಡಿ ಪದವಿ ಪ್ರದಾನ ಮಾಡಲಾಗಿದೆ.
ಪ್ರಸ್ತುತ ಧಾರವಾಡದ ಸರಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿರುವ ಗಾಯತ್ರಿ ಕುಲಕರ್ಣಿ ಅವರು ಮೂಲತಃ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ಮಾಗಳ ಗ್ರಾಮದವರಾಗಿದ್ದಾರೆ.