Sunday, April 20, 2025
Google search engine

Homeರಾಜ್ಯಸುದ್ದಿಜಾಲಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಕೊಳ್ಳಲು ವಿದ್ಯಾರ್ಥಿಗಳಿಗೆ ಗೀತಾ ಹುಡೇದ ಸಲಹೆ

ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಕೊಳ್ಳಲು ವಿದ್ಯಾರ್ಥಿಗಳಿಗೆ ಗೀತಾ ಹುಡೇದ ಸಲಹೆ

ಚಾಮರಾಜನಗರ: ವಿದ್ಯಾರ್ಥಿಗಳು ಓದಿನೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ಸಲಹೆ ಮಾಡಿದರು.

ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿಂದು ಕರ್ನಾಟಕ ರಾಜ್ಯ ಏಡ್ಸ್‍ಪ್ರಿವೆನ್‍ಷನ್ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ ಹಾಗೂ ಇತರೆ ಇಲಾಖೆ ಸಹಯೋಗದಲ್ಲಿ ಏಡ್ಸ್ ವಿರುದ್ದದ ಜಾಗೃತಿಗಾಗಿ ಏರ್ಪಡಿಸಿದ್ದ ರಸಪ್ರಶ್ನೆ, ರೀಲ್ಸ್ ಸ್ಪರ್ಧೆ, ಮ್ಯಾರಾಥಾನ್ ಹಾಗೂ ನಾಟಕ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.

ಹೆಚ್.ಐ.ವಿ ಏಡ್ಸ್ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಹಾಗೂ ಮತ್ತಿತ್ತರ ಸಂಘ ಸಂಸ್ಥೆಗಳು ಸತತವಾಗಿ ನಾಲ್ಕು ದಿನಗಳಿಂದ ಹಮ್ಮಿಕೊಂಡಿದ್ದ ಜಾಗೃತಿ ವಿಶೇಷ ಚಟುವಟಿಕೆಗಳಿಗೆ ಯುವಜನರು ಉತ್ತಮವಾಗಿ ಸ್ಪಂದಿಸಿದ್ದಾರೆ. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ನೀಡುತ್ತಿರುವುದು ವೈಯಕ್ತಿಕವಾಗಿ ನನಗೆ ಸಂತಸ ತಂದಿದೆ. ಯುವಜನತೆ ಹೆಚ್.ಐ.ವಿ ಏಡ್ಸ್‍ನಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಪೂರ್ಣ ಪ್ರಮಾಣದಲ್ಲಿ ತಿಳಿದುಕೊಂಡು ಸುತ್ತಮುತ್ತಲಿನ ಜನರಿಗೂ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದರು.

ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಮೊಬೈಲ್‍ನಿಂದ ದೂರ ಉಳಿದು ಓದಿನತ್ತ ಗಮನವಹಿಸಬೇಕು. ಅರ್ಥಪೂರ್ಣ, ಕ್ರಿಯಾಶೀಲ ಚಟುವಟಿಕೆಗಳಲ್ಲಿ ಹೆಚ್ಚಾಗಿ ಭಾಗವಹಿಸಿ ಉತ್ತಮ ಜೀವನ ಶೈಲಿ ಮೈಗೂಡಿಸಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ಸಲಹೆ ಮಾಡಿದರು.

ಜಿಲ್ಲಾ ಕ್ಷಯರೋಗ ಮತ್ತು ಏಡ್ಸ್ ನಿಯಂತ್ರಣಾಧಿಕಾರಿ ಡಾ. ರವಿಕುಮಾರ್ ಅವರು ಮಾತನಾಡಿ ಏಡ್ಸ್ ರೋಗ ತಡೆಗಟ್ಟಲು ಹಲವಾರು ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲೆಯ ಜನರಿಗೆ ವಿಶೇಷವಾಗಿ ಯುವಜನತೆ ಮೂಲಕ ಜಾಗೃತಿ ಮೂಡಿಸಲು ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಏಡ್ಸ್ ರೋಗ ಹೆಚ್ಚಳವಾಗದಂತೆ ಮತ್ತಷ್ಟು ಪರಿಣಾಮಕಾರಿ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಚಾಮರಾಜನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಲೋಕೇಶ್, ಡಾ. ನಾಗೇಂದ್ರ ಕುಮಾರ್, ಈಶ್ವರಿ ಟ್ರಾಕ್ಟರ್ ಮಾಲೀಕರಾದ ಅಶೋಕಕುಮಾರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ದೊರೆಸ್ವಾಮಿ ನಾಯಕ್ ಇತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular