Friday, April 18, 2025
Google search engine

Homeರಾಜ್ಯಸುದ್ದಿಜಾಲವಿಜಯಕುಮಾರ್‌ಗೆ ವಿಧಾನ ಪರಿಷತ್ ಸ್ಥಾನ ನೀಡಲು ಪ್ರಧಾನ ಕಾರ್ಯದರ್ಶಿ ಸಿ.ಜೆ.ಪಾಲಾಕ್ಷಗೌಡ ಒತ್ತಾಯ

ವಿಜಯಕುಮಾರ್‌ಗೆ ವಿಧಾನ ಪರಿಷತ್ ಸ್ಥಾನ ನೀಡಲು ಪ್ರಧಾನ ಕಾರ್ಯದರ್ಶಿ ಸಿ.ಜೆ.ಪಾಲಾಕ್ಷಗೌಡ ಒತ್ತಾಯ

ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ: ಕಳೆದ ೨೨ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ವಿವಿದ ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸಿ ಸಂಘಟನೆಯಲ್ಲಿ ಮಂಚೂಣಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ಅವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಹಿರಿಯ ಪ್ರಧಾನ ಕಾರ್ಯದರ್ಶಿ ಸಿ.ಜೆ.ಪಾಲಾಕ್ಷಗೌಡರು ಒತ್ತಾಯಿಸಿದ್ದಾರೆ.

ತಮ್ಮ ರಾಜಕೀಯ ಜೀವನದಲ್ಲಿ ಎಸ್‌ಎಸ್‌ಯುಐ ಮತ್ತು ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಕೆಲಸ ಮಾಡುವುದರ ಜತೆಗೆ ಪ್ರಸ್ತುತ ೧೦ ವರ್ಷಗಳಿಂದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿರುವ ಅವರಿಗೆ ಸ್ಥಾನ ನೀಡಿದರೆ ಹಳೆ ಮೈಸೂರು ಬಾಗದಲ್ಲಿ ಪಕ್ಷ ಸಂಘಟನೆಗೆ ಅನೂಕೂಲವಾಗಲಿದೆ ಎಂದು ತಿಳಿಸಿದ್ದಾರೆ. ಡಾ.ಬಿ.ಜೆ.ವಿಜಯ್‌ಕುಮಾರ್ ಅವರು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ನಂತರ ಪಕ್ಷ ನಿರಂತರವಾಗಿ ಜಯಬೇರಿ ಬಾರಿಸುವುದರ ಜತೆಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿಯೂ ಗಣನೀಯ ಸಾಧನೆ ಮಾಡಿದ್ದು ಇದನ್ನು ಪಕ್ಷದ ವರಿಷ್ಠರು ಗಣನೆಗೆ ತೆಗೆದುಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ತಮ್ಮ ಸಂಘಟನಾ ಚಾತುರ್ಯದ ಮೂಲಕ ಮೈಸೂರು ಜಿಲ್ಲೆಯಲ್ಲದೆ ಹಾಸನ, ಕೊಡಗು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿಯೂ ಪರಿಚಿತರಾಗಿರುವ ಡಾ.ಬಿ.ಜೆ.ವಿಜಯಕುಮಾರ್ ಅವರಿಗೆ ವಿದಾನ ಪರಿಷತ್ ಸ್ಥಾನ ನೀಡುವ ವಿಶ್ವಾಸವಿದೆ ಎಂದವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರೈತರ ಆತ್ಮಹತ್ಯೆ ವಿಚಾರದ ಬಗ್ಗೆ ಅಧ್ಯಯನ ನಡೆಸಿ ಪಿಹೆಚ್‌ಡಿ ಪಡೆದು ಅನ್ನಧಾತರ ಪರವಾಗಿಯೂ ಕೆಲಸ ಮಾಡುತ್ತಿರುವ ಅವರಿಗೆ ರಾಜಕೀಯ ಸ್ಥಾನಮಾನ ನೀಡಿದರೆ ಸರ್ಕಾರದ ಜನಪರವಾದ ಕಾರ್ಯಕ್ರಮ ಮತ್ತು ಯೋಜನೆಗಳು ಅರ್ಹರ ಮನೆ ಬಾಗಿಲಿಗೆ ತಲುಪಲು ಸಹಾಕಾರಿಯಾಗಲಿದೆ ಎಂದಿದ್ದಾರೆ.

೧೯೩೮ ರಲ್ಲಿ ನಡೆದ ಐತಿಹಾಸಿಕ ಶಿವಪುರ ದ್ವಜ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಕರ ನಿರಾಕರಣೆ ಚಳುವಳಿ ಮತ್ತು ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಚಳುವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆಯ ಹಿರಿಯ ಸ್ವಾತಂತ್ರ?ಯ ಹೋರಾಟಗಾರರಾದ ದಿ.ಮಾಯಣ್ಣಗೌಡರ ಅಳಿಯನಾಗಿರುವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಈ ಸ್ಥಾನ ನೀಡಿದರೆ ಅದು ಸ್ವಾತಂತ್ರ?ಯ ಹೋರಾಟಗಾರರಿಗೆ ಗೌರವ ನೀಡಿದಂತಾಗುತ್ತದೆ ಎಂದು ಪ್ರತಿಪಾದಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಮುಖಂಡರ ಜೊತೆಗೂಡಿ ಮುಖ್ಯಮಂತ್ರಿ ಮತ್ತು ಉಪ-ಮುಖ್ಯಮಂತ್ರಿ ಮತ್ತು ಪಕ್ಷದ ವರಿಷ್ಠರನ್ನು ಬೇಟಿಯಾಗಿ ಡಾ.ಬಿ.ಜೆ. ವಿಜಯಕುಮಾರ್ ಅವರಿಗೆ ವಿದಾನ ಪರಿಷತ್ ಸ್ಥಾನ ನೀಡುವಂತೆ ಮನವಿ ಮಾಡಲಾಗುವುದು ಎಂದು ಹಿರಿಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಇವರೊಂದಿಗೆ ವರುಣಾ ವಿದಾನ ಸಭಾ ಕ್ಷೇತ್ರದ ಮಾಜಿ ಶಾಸಕರು ಆದ ಯತೀಂದ್ರಸಿದ್ದರಾಮ್ಯನವರಿಗೂ ವಿದಾನ ಪರಿಷತ್ ಸದಸ್ಯ ಸ್ಥಾನ ನೀಡಬೇಕು ಎಂದು ಸಿ.ಜೆ.ಪಾಲಾಕ್ಷಗೌಡರು ಮನವಿ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular