Monday, April 21, 2025
Google search engine

Homeಅಪರಾಧಚಿಕ್ಕಮಗಳೂರಿನಲ್ಲಿ ಡೆಂಗ್ಯೂ ಜ್ವರಕ್ಕೆ ಬಾಲಕಿ ಸಾವು

ಚಿಕ್ಕಮಗಳೂರಿನಲ್ಲಿ ಡೆಂಗ್ಯೂ ಜ್ವರಕ್ಕೆ ಬಾಲಕಿ ಸಾವು

ಚಿಕ್ಕಮಗಳೂರು: ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಆರು ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಡೆದಿದೆ.

ಸಖರಾಯಪಟ್ಟಣದ ಆಸಿಫ್ ಎಂಬವರ ಪುತ್ರಿ ಸಾನಿಯಾ(೬) ಮೃತರು. ಡೆಂಗ್ಯೂನಿಂದ ಬಳಲುತ್ತಿದ್ದ ಸಾನಿಯಾಳನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಚಿಕ್ಕಮಗಳೂರಿನಲ್ಲಿ ಡೆಂಗ್ಯೂ ವ್ಯಾಪಕವಾಗಿ ಹರಡುತ್ತಿದೆ. ಸರಕಾರ ಈ ಬಗ್ಗೆ ಗಮನಹರಿಸಬೇಕು. ನನ್ನ ಮಗಳಿಗಾದ ಸ್ಥಿತಿ ಬೇರೆ ಯಾರಿಗೂ ಆಗಬಾರದು ಎಂದು ಸಾನಿಯಾರ ತಂದೆ ಆಸಿಫ್ ಹೇಳಿದ್ದಾರೆ. ನನಗೆ ಯಾವುದೇ ಸಹಾಯ ಬೇಡ, ಆದರೆ ಸರಕಾರಿ ಆಸ್ಪತ್ರೆಗಳನ್ನು ಅಭಿವೃದ್ಧಿ ಮಾಡಿ ಎಂದು ಮನವಿ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular