ಮಂಡ್ಯ: ಗ್ರಾಮೀಣ ಪ್ರದೇಶದಲ್ಲಿನ ಕುಡಿಯುವ ನೀರಿನ ಮೂಲಗಳ ಗುಣಮಟ್ಟವನ್ನು ಸ್ಥಳೀಯ ಗ್ರಾಮ ಪಂಚಾಯತ್‌ಗಳು ಆಗಿಂದಾಗ್ಗೆ ಪರೀಕ್ಷಿಸಿ ಶುದ್ಧ ಮತ್ತು ಸುರಕ್ಷಿತ ನೀರನ್ನು ಸಾರ್ವಜನಿಕರಿಗೆ ಸರಬರಾಜು ಮಾಡುವಂತೆ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್ ಅವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಅವರು ಇಂದು ಎಲ್ಲಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನು ಮಂಡ್ಯದ ಜಿಲ್ಲಾ ಪಂಚಾಯತ್ ಕಚೇರಿಯ ಕಾವೇರಿ ಸಭಾಂಗಣದಲ್ಲಿ ನಡೆಸಿ ಮಾತನಾಡಿದರು.
ಕುಡಿಯುವ ನೀರಿನ ಮೂಲಗಳ ಹತ್ತಿರ ಸ್ವಚ್ಛತೆ ಕಾಪಾಡುವುದು, ಕೊಳಚೆ ನೀರು ನಿಲ್ಲದಂತೆ ನೋಡಿಕೊಳ್ಳುವುದು. ಒಡೆದ ಪೈಪ್‌ಗಳನ್ನು ಕೂಡಲೇ ಸರಿಪಡಿಸುವುದು ಮತ್ತು ನೀರಿಗೆ ಯಾವುದೇ ರೀತಿಯ ಕಲ್ಮಶಗಳು ಸೇರದಂತೆ ಅಗತ್ಯ ಕ್ರಮವಹಿಸುವುದು. ಶುದ್ಧ ಕುಡಿಯುವ ನೀರು ಸರಬರಾಜು ಮಾಡಲು ಮುಂಜಾಗ್ರತ ಕ್ರಮಗಳನ್ನು ವಹಿಸುವ ಸಂಬಂಧ ಜೂನ್ ೨೩ ರಿಂದ ಜೂನ್ ೨೬ರವರೆಗೆ ಅಭಿಯಾನ ಹಮ್ಮಿಕೊಂಡಿದ್ದು ಸಮರೋಪಾದಿಯಲ್ಲಿ ಕೆಲಸ ನಿರ್ವಹಿಸುವಂತೆ ಅಧಿಕಾರಿಗಳಿಗೆ ಹೇಳಿದರು.
ಅಭಿಯಾನದ ಭಾಗವಾಗಿ ಗ್ರಾಮಾಂತರ ಪ್ರದೇಶದ ವ್ಯಾಪ್ತಿಯಲ್ಲಿನ ಕುಡಿಯುವ ನೀರಿನ ಸ್ಥಾವರಗಳಾದ ಓವರ್ ಹೆಡ್ ಟ್ಯಾಂಕ್‌ಗಳು, ಕಿರು ನೀರು ಸರಬರಾಜು ಸ್ಥಾವರಗಳು, ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ವಚ್ಛಗೊಳಿಸಿ ಕ್ಲೋರಿನೇಷನ್ ಮಾಡುವುದು ಮತ್ತು ಕುಡಿಯುವ ನೀರಿನ ಮೂಲಗಳ ಸುತ್ತ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದರು.
ಓವರ್ ಹೆಡ್ ಟ್ಯಾಂಕ್‌ಗಳು, ಕಿರು ನೀರು ಸರಬರಾಜು ಸ್ಥಾವರಗಳು, ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ವಚ್ಛಗೊಳಿಸಿದ ನಂತರ ಮತ್ತೊಮ್ಮೆ ನೀರಿನ ಮಾದರಿಗಳನ್ನು ಸಂಗ್ರಹಿಸಿ ಈಖಿಏ & ಊ೨ ಗಿಚಿiಟsಗಳ ಮೂಲಕ ಪರೀಕ್ಷಿಸುವುದು, ನೀರಿನ ಪರೀಕ್ಷೆಯಲ್ಲಿ ಕಲ್ಮಶಗಳು ಕಂಡು ಬಂದಲ್ಲಿ ಸದರಿ ನೀರಿನ ಮಾದರಿಗಳನ್ನು ಜಿಲ್ಲಾ ಮತ್ತು ತಾಲ್ಲೂಕು ಹಂತದ ಪ್ರಯೋಗಾಲಯಗಳಿಗೆ ಕಳುಹಿಸುವಂತೆ ಸಲಹೆ ನೀಡಿದರು.
ಒಂದು ವೇಳೆ ಕಲುಷಿತ ನೀರು ಸೇವನೆಯಿಂದ ಸಾರ್ವಜನಿಕರಿಗೆ ಆರೋಗ್ಯದಲ್ಲಿ ವ್ಯತ್ಯಾಸಗಳಾಗುವುದು ಅಥವಾ ಜೀವ ಹಾನಿಯಂತಹ ಪ್ರಕರಣಗಳು ವರದಿಯಾದಲ್ಲಿ ಅಂತಹ ಗ್ರಾಮಕ್ಕೆ ಸಂಬಂಧಪಟ್ಟ ಎಲ್ಲಾ ಹಂತದ ಅಧಿಕಾರಿ/ಸಿಬ್ಬಂದಿಗಳನ್ನು ಹೊಣೆಗಾರರನ್ನಾಗಿಸಿ ಕಟ್ಟುನಿಟ್ಟಿನ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ಡಿ.ಹೆಚ್.ಒ ಡಾ.ಧನಂಜಯ, ಉಪ ಕಾರ್ಯದರ್ಶಿ ಆಡಳಿತ ಎಂ ಬಾಬು, ಉಪಕಾರ್ಯದರ್ಶಿ ಅಭಿವೃದ್ಧಿ ಸಂಜೀವಪ್ಪ, ಯೋಜನ ನಿರ್ದೇಶಕ ಧನರಾಜ್ ಬೋರಳೆ, ಗ್ರಾಮೀಣ ಕುಡಿಯುವ ನೀರು ಇಲಾಖೆಯ ಕಾರ್ಯಪಾಲಕ ಅಭಿಯಂತರ ತಮ್ಮಣ್ಣ ಹಾಗೂ ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯಿತಿಯ ಎಲ್ಲಾ ಇಓ ಮತ್ತು ಪಿಡಿಓ ಗಳು ಹಾಜರಿದ್ದರು.