Friday, April 18, 2025
Google search engine

Homeರಾಜ್ಯಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ನೀಡಿ: ಕೇಂದ್ರಕ್ಕೆ ಡಾ.ತೋಂಟದ ಸಿದ್ದರಾಮ ಸ್ವಾಮೀಜಿ ಮನವಿ

ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ನೀಡಿ: ಕೇಂದ್ರಕ್ಕೆ ಡಾ.ತೋಂಟದ ಸಿದ್ದರಾಮ ಸ್ವಾಮೀಜಿ ಮನವಿ

ಗದಗ: ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಕೇಳಿಕೊಳ್ಳುತ್ತೇವೆ ಎಂದು ಡಾ.ತೋಂಟದ ಸಿದ್ದರಾಮ ಸ್ವಾಮೀಜಿ ಮನವಿ ಮಾಡಿದ್ದಾರೆ.

ಗದಗನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂಗಾಯತ ಪ್ರತ್ಯೇಕ ಧರ್ಮವಾಗಬೇಕೆಂಬ ವರದಿ ಯಾವ ಕಾರಣಕ್ಕೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ತಿರಸ್ಕಾರಗೊಂಡಿದೆ ಎಂದು ಗಮನಿಸಿ ಅದಕ್ಕೆ ಸಂಬಂಧಿಸಿ ಪಡೆದು ದಾಖಲೆ ಒದಗಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.

ಲಿಂಗಾಯತ ಧರ್ಮ ಒಂದು ಸ್ವತಂತ್ರ ಧರ್ಮ ಎನ್ನುವ ವಿಷಯ ಇಟ್ಟಿಕೊಂಡು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದೆವು. ಮುಖ್ಯಮಂತ್ರಿಗಳು(ಸಿದ್ದರಾಮಯ್ಯ) ನಿವೃತ್ತ ನ್ಯಾಯಮೂರ್ತಿ ಎಚ್ ಎನ್ ನಾಗಮೋಹನ್ ದಾಸ ಅವರ ನೇತೃತ್ವದಲ್ಲಿ ಸಮಿತಿ ಮಾಡಿದ್ದರು. ಸಮಿತಿಯ ಮೂಲಕ ವರದಿ ಪಡೆದುಕೊಂಡು ಲಿಂಗಾಯತ ಧರ್ಮ ಒಂದು ಸ್ವತಂತ್ರ ಧರ್ಮ . 12 ನೇ ಶತಮಾನದಲ್ಲಿ ಮಹಾನ್ ಮಾನವತವಾದಿ ಬಸವಣ್ಣನವರು ಸ್ಥಾಪಿಸಿದ ಧರ್ಮವೆಂದು ಮನಗೊಂಡು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದರು. ಆದರೆ, ಕೇಂದ್ರ ಸರ್ಕಾರದವರು ಆ ವರದಿಯನ್ನ ವಿಸ್ತೃತವಾಗಿ ಅಧ್ಯಯನ ಮಾಡಲಾರದೆ ಯಾವುದೊಂದು ಪೂರ್ವಾಗ್ರಹಕ್ಕೆ ಒಳಗಾಗಿ ಇದನ್ನು ಮಾನ್ಯ ಮಾಡಲು ಸದ್ಯದ ಪರಿಸ್ಥಿತಿಯಲ್ಲಿ ಕಷ್ಟದಾಯಕವಾಗಿದೆ ಎಂಬ ಮಾತನ್ನು ಹೇಳಿ ಮರಳಿಸಿದ್ದಾರೆಂದು ಕೇಳಿದ್ದೇವೆ. ಲಿಂಗಾಯತ ಪ್ರತ್ಯೇಕ ಧರ್ಮವಾಗಬೇಕೆಂಬ ವರದಿ ಯಾವ ಕಾರಣಕ್ಕೆ ತಿರಸ್ಕಾರಗೊಂಡಿದೆ ಎಂದು ಗಮನಿಸಿ ಅದಕ್ಕೆ ಸಂಬಂಧಿಸಿ ಪಡೆದು ದಾಖಲೆ ಒದಗಿಸುತ್ತೇವೆ ಎಂದರು.

ಮತ್ತೆ ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಕೇಳಿಕೊಳ್ಳುತ್ತೇವೆ. ಸಿದ್ದರಾಮಯ್ಯ ನವರು ಬದ್ಧತೆ ಹೆಸರಾದವರು. ಲಿಂಗಾಯತ ಧರ್ಮ ಸ್ವತಂತ್ರ ಎನ್ನುವುದನ್ನ ಮನಗಂಡು ನ್ಯಾಯಮೂರ್ತಿ ಎಚ್ ಎನ್ ನಾಗಮೋಹನ್ ದಾಸ ಅವರ ವರದಿಯನ್ನ ವಿಸ್ತೃತವಾಗಿ ಓದಿ ಕೇಂದ್ರಕ್ಕೆ ಶಿಫಾರಸು ಮಾಡಿದ್ದರು. ನಂತರ ಕೆಲವು ವ್ಯಕ್ತಿಗಳು ಅದರಿಂದ ನಮಗೆ ಚುನಾವಣೆಯಲ್ಲಿ ಹಿನ್ನಡೆ ಆಯಿತು ಎಂಬ ಗುಮಾನಿ ಎಬ್ಬಿಸಿರುವುದನ್ನು ನಾವು ಗಮನಿಸಿದೇವೆ. ವಾಸ್ತವವಾಗಿ ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮ ಮಾನ್ಯತೆ ನೀಡಬೇಕು ಎಂದು ಶಿಫಾರಸು ಮಾಡಿದಕ್ಕೆ ಚುನಾವಣೆಯಲ್ಲಿ ಹಿನ್ನಡೆ ಆಗಲಿಲ್ಲ. ಯಾವುದೇ ಒಂದು ಚುನಾವಣೆಯಲ್ಲಿ ಆಡಳಿತಾರೂಢದ ಪಕ್ಷದ ವಿರೋಧ ಅಲೇ ಇರುತ್ತದೆ. ಈ ಹಿನ್ನಲೆಯಲ್ಲಿ ಆ ಚುನಾವಣೆಯಲ್ಲಿ ಸೋಲು ಅನುಭವಿಸಬೇಕಾಯಿತು ಎಂದು ತಿಳಿಸಿದರು.

ಅದೇ ಮಾತನ್ನು ಈಗ ಬಿಜೆಪಿ ಸರ್ಕಾರದ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿದಕ್ಕೆ ಲಿಂಗಾಯತ ಸ್ವಧರ್ಮ ಮಾನ್ಯತೆ ಮಾಡಲಿಲ್ಲ ಎನ್ನುವುದಕ್ಕೆ ಹಿನ್ನಡೆ ಆಯಿತು ಎನ್ನುವುದು ತಪ್ಪಾಗುತ್ತದೆ. ಯಾಕೆಂದರೆ ಒಂದು ಸಂದರ್ಭದಲ್ಲಿ ಒಂದೊಂದು ವಿಷಯಗಳು ಬಹು ಮುಖ್ಯವಾಗಿ ಚರ್ಚೆ ಇರುತ್ತದೆ. ಸಿದ್ದರಾಮಯ್ಯನವರಿಗೆ ಸ್ಪಷ್ಟವಾಗಿ ಗೊತ್ತಿದೆ. ಆದರೂ ಎಂತಹ ಸಂದರ್ಭದಲ್ಲೂ ಸಹ ಈ ಕಾರಣಕ್ಕಾಗಿ ಹಿನ್ನಡೆ ಆಗಿತ್ತು ಎಂದು ಎಲ್ಲಿಯೂ ಸಿದ್ದರಾಮಯ್ಯನವರು ಹೇಳಿಕೊಂಡಿಲ್ಲ ಎಂದರು.

ಮತ್ತೊಮ್ಮೆ ವರದಿಯನ್ನು ಕೇಂದ್ರಕ್ಕೆ ಕಳುಹಿಸಿ, ಶಿಫಾರಸ್ಸು ಮಾಡಬೇಕೆಂದು ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದರು.

RELATED ARTICLES
- Advertisment -
Google search engine

Most Popular