ವರದಿ : ಚಪ್ಪರದಹಳ್ಳಿ ವಿನಯ್ ಕುಮಾರ್
ಬೆಟ್ಟದಪುರ: ಆಧುನಿಕ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದು ಡಿಟಿಎಂಎನ್ ವಿದ್ಯಾಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ್ ಹೇಳಿದರು.
ಬೆಟ್ಟದಪುರದ ಡಿಟಿಎಂಎನ್ ವಿದ್ಯಾಸಂಸ್ಥೆಯಲ್ಲಿ ಶನಿವಾರ ಆಯೋಜಿಸಿದ್ದ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಶಿಕ್ಷಣ ದೊಡ್ಡ ಆಸ್ತಿಯಾಗಿದೆ. ಸಮಾಜದಲ್ಲಿ ಮೌಡ್ಯತೆ, ಅಂಧಕಾರವನ್ನು ತೊಲಗಿಸಿ ಪ್ರತಿಯೊಬ್ಬರಿಗೂ ಜ್ಞಾನ ನೀಡುವುದು ಶಿಕ್ಷಣ ಮಾತ್ರ. ಹಾಗಾಗಿ ಯಾರು ಕೂಡ ಶಿಕ್ಷಣದಿಂದ ವಂಚಿತರಾಗಬಾರದು. ಗುರುಗಳು ಹಾಕಿಕೊಡುವ ಮಾರ್ಗದರ್ಶನದಲ್ಲಿ ಸಾಗುವ ಮೂಲಕ ಜೀವನದಲ್ಲಿ ನಿರ್ದಿಷ್ಟ ಗುರಿ ಇಟ್ಟುಕೊಂಡು ಅದನ್ನು ಸಾಧಿಸಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಶ್ರೀಶೈಲಾ, ಖಜಾಂಚಿ ಪಿ.ರವಿ, ನಿರ್ದೇಶಕರಾದ ಸಿ.ಟಿ ಗುರುದತ್, ವಿಜಯಕುಮಾರ್, ಪ್ರಾಂಶುಪಾಲ ಸತೀಶ್, ಮುಖ್ಯಶಿಕ್ಷಕರಾದ ಮುರುಳಿಕೃಷ್ಣ, ಜಯಂತಿ ಸೇರಿದಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.